Mon. Dec 23rd, 2024

ಅದಾನಿಯನ್ನ ರಕ್ಷಿಸುತ್ತಿರೋದು ಯಾರಂತ ಇಡೀ ದೇಶಕ್ಕೆ ಗೊತ್ತು: ಸಿಎಂ

Share this with Friends

ಬೆಂಗಳೂರು: ಅರೆಸ್ಟ್ ವಾರೆಂಟ್ ಬಂದಿದ್ದರೂ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ, ಅವರನ್ನು ರಕ್ಷಿಸುತ್ತಿರುವವರು ಯಾರು ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಮೈಸೂರು ವಿಮಾನ‌ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,ಅದಾನಿಗೆ ರಕ್ಷಣೆ ಕೊಡುತ್ತಿರುವವರು ಯಾರು ಎನ್ನುವುದು ದೇಶಕ್ಕೇ ಗೊತ್ತಿದೆ, ಈ ಸತ್ಯವನ್ನು ಮಾಧ್ಯಮಗಳು ದೇಶದ ಜನರಿಗೆ ಏಕೆ ತೋರಿಸುತ್ತಿಲ್ಲ ಎಂದು ಮತ್ತೆ ಪ್ರಶ್ನಿಸಿದರು.

ರೈತರಿಗೆ ರಿಯಾಯ್ತಿ ಬಡ್ಡಿ ದರದಲ್ಲಿ ಕೊಡುವ ಸಾಲದ ಮೊತ್ತವನ್ನು ನಬಾರ್ಡ್ ಈ ಬಾರಿ ಶೇ 58 ರಷ್ಟು ರಾಜ್ಯಕ್ಕೆ ಕಡಿತಗೊಳಿಸಿದೆ. ಇದು ರಾಜ್ಯದ ರೈತರಿಗೆ ಮಾಡಿದ ಪರಮ ಅನ್ಯಾಯ ಎಂದು ಸಿದ್ದರಾಮಯ್ಯ ಟೀಕಿಸಿದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಈ ಅನ್ಯಾಯ ಸರಿ ಎಂದು ಹೇಳಿದ್ದಾರಲ್ಲಾ ಎಂಬ ಪ್ರಶ್ನೆಗೆ,ರಾಜ್ಯದ ರೈತರಿಗೆ ಕೇಂದ್ರ ಅನ್ಯಾಯ ಮಾಡಿದ್ದು ಸರಿ ಎಂದು ಅವರು ಹೇಳಿದ್ದರೆ ಮಣ್ಣಿನ ಮಗ,ರೈತರ ಮಗ ಅಂದುಕೊಳ್ಳುವ ಹೆಚ್.ಡಿ.ಕುಮಾರಸ್ವಾಮಿಯವರು ಉಸಿರೇ ಬಿಟ್ಟಿಲ್ಲವಲ್ಲ ಏಕೆ ಎಂದು ಪ್ರಶ್ನಿಸಿದರು.

ವರ್ಷದಿಂದ ವರ್ಷಕ್ಕೆ ನಬಾರ್ಡ್ ನಿಂದ ರಾಜ್ಯದ ರೈತರಿಗೆ ಕೊಡುವ ಸಾಲದ ಪ್ರಮಾಣ ಹೆಚ್ಚಾಗಬೇಕು. ಆದರೆ ಈ ಬಾರಿ ಕಡಿತಗೊಳಿಸಿದೆ ಎಂದು ಸಿಎಂ ದೂರಿದರು.

ಕೇಂದ್ರ ಸರ್ಕಾರವೇ ಬಿಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸಿದೆ. ಈಗ ಅವರೇ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರಲ್ಲಾ ಎನ್ನುವ ಪತ್ರಕರ್ತರ ಪ್ರಶ್ನೆಗೆ ಆಕ್ರೋಶಗೊಂಡ ಸಿಎಂ, ಆಹಾರ ಭದ್ರತಾ ಕಾಯ್ದೆಯನ್ನು ಜಾರಿ ಮಾಡಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಇದನ್ನು ಬಿಜೆಪಿ ವಿರೋಧಿಸಿತ್ತು. ಹಿಂದಿನ‌ ಕೇಂದ್ರ ಸಚಿವರಾಗಿದ್ದ ಮುರಳಿ ಮನೋಹರ ಜೋಶಿಯವರು ಆಹಾರ ಭದ್ರತೆ ಕಾಯ್ದೆಯನ್ನು ವಿರೋಧಿಸಿದ್ದರು. ಈಗ ಅನ್ಯಾಯ ಅನ್ಯಾಯ ಅಂತ ಸುಳ್ಳೇ ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೊದಲಿಗೆ ರಾಜ್ಯದ ಜನರಿಗೆ ಏಳು ಕೆಜಿ ಅಕ್ಕಿ ಕೊಟ್ಟವರು ನಾವು. ಇದನ್ನು ಐದು ಕೆಜಿಗೆ ಇಳಿಸಿದ್ದು ಯಡಿಯೂರಪ್ಪ.ಈಗ ಯಡಿಯೂರಪ್ಪ ಅವರ ಮಗ ವಿಜಯೇಂದ್ರನಿಗೆ ಈ ಬಗ್ಗೆ ಮಾತಾಡಲು ಯಾವ ನೈತಿಕತೆ ಇದೆ ಎಂದು ಸಿದ್ದು ಪ್ರಶ್ನಿಸಿದರು.

ಯಡಿಯೂರಪ್ಪ ಅಕ್ಕಿ ಪ್ರಮಾಣವನ್ನು ಐದು ಕೆಜಿಗೆ ಇಳಿಸಿದ್ದನ್ನು ಹತ್ತು ಕೆಜಿಗೆ ಏರಿಸಿದ್ದು ನಾವು ಈ ಸತ್ಯ ರಾಜ್ಯದ ಜನರಿಗೆ ಗೊತ್ತಿದೆ ಎಂದು ಹೇಳಿದರು.

ಸರ್ಕಾರಿ ನೌಕರರಿಗೆ, ಆದಾಯ ತೆರಿಗೆ ಪಾವತಿಸುವವರಿಗೆ ಬಿಪಿಎಲ್ ಕಾರ್ಡ್ ಕೊಡಬಾರದು ಅಂತ ನಿಯಮಾವಳಿ, ಗೈಡ್ ಲೈನ್ ರಚಿಸಿದ್ದೇ ಬಿಜೆಪಿ‌. ಈಗ ಇವರೇ ಪ್ರತಿಭನೆ ಮಾಡ್ತಾರೆ ಎಂದು ಸಿದ್ದರಾಮಯ್ಯ ಟೀಕಿಸಿದರು.


Share this with Friends

Related Post