ಬೆಳಗಾವಿ: ರಜೆಗೆ ಊರಿಗೆ ಬಂದಿದ್ದ ಯೋಧರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ದೇವಗಾಂವ ಎಂಬ ಗ್ರಾಮದಲ್ಲಿ ನಡೆದಿದೆ.
ನರೇಶ್ ಅಗಸರ (28) ಆತ್ಮಹತ್ಯೆ ಮಾಡಿಕೊಂಡಿರುವ ಯೋಧ.
ಅವರು ಕಳೆದ 4 ವರ್ಷಗಳಿಂದ ಭಾರೀತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. 20 ದಿನಗಳ ಹಿಂದೆ ನರೇಶ್ ರಜೆಯ ಮೇಲೆ ಊರಿಗೆ ಬಂದಿದ್ದರು.ಇವತ್ತು ಕರ್ತವ್ಯಕ್ಕೆ ಹೋಗಬೇಕಾಗಿತ್ತು.
ಆದರೆ ಅದೇನಾಯಿತೊ ಯೋಧ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿತ್ತೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.