Mon. Dec 23rd, 2024

ಬಿ ಪಿ ಎಲ್ ಕಾರ್ಡ್ ರದ್ದು: ಕರ್ನಾಟಕ ಸೇನಾ ಪಡೆ ಪ್ರತಿಭಟನೆ

Share this with Friends

ಮೈಸೂರು: ರಾಜ್ಯ ಸರ್ಕಾರ ಬಡವರ ಬಿ ಪಿ ಎಲ್ ಕಾರ್ಡ್ ಗಳನ್ನು ರದ್ದು ಮಾಡಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಸದಸ್ಯರು ಪ್ರತಿಭಟನೆ ನಡೆಸಿದರು.

ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಬಡವರಿಗೆ ನೀಡಿರುವ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಬಾರದೆಂದು ಆಗ್ರಹಿಸಿದರು.

ಮೈಸೂರಿನ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರ ಕರ್ನಾಟಕ ರಾಜ್ಯದ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ, ಬಡವರಿಗೆ ನೀಡಿರುವ ಬಿಪಿಎಲ್ ಕಾರ್ಡ್ ಗಳನ್ನು ಕಿತ್ತುಕೊಂಡು ಅವರ ಜೀವನವನ್ನೇ ನಾಶ ಮಾಡುತ್ತಿದೆ ಎಂದು ಕರ್ನಾಟಕ ಸೇನಾ ಪಡೆ
ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಜನತೆಗೆ ಐದು ಬಿಟ್ಟಿ ಭಾಗ್ಯಗಳನ್ನು ನೀಡಿ, ಈಗ ಆ ಭಾಗ್ಯಗಳಿಗೆ ಹಣ ಹೊಂದಿಸಲಾಗದೆ ಬಡವರ ಬಿಪಿಎಲ್ ಕಾರ್ಡನ್ನು ರದ್ದು ಮಾಡಿರುವುದು ಅತ್ಯಂತ ಶೋಚನೀಯ ಸಂಗತಿಯಾಗಿದೆ.

ಒಂದು ಕಡೆ ಸರ್ಕಾರ ಗ್ಯಾರಂಟಿಗಳನ್ನು ಕೊಟ್ಟು, ಜನರಿಗೆ ಮಂಕುಬೂದಿ ಎರಚಿ, ಇನ್ನೊಂದು ಕಡೆ ಅದೇ ಜನರಿಗೆ ನೀಡಿರುವ ಅತಿ ಅವಶ್ಯಕವಾದ ಬಿಪಿಎಲ್ ಕಾರ್ಡ್ಗಳನ್ನು ಕಿತ್ತುಕೊಂಡು ಹೊಟ್ಟೆಯ ಮೇಲೆ ಹೊಡೆಯುತ್ತಿದೆ, ಬರೀ ಹಿಂದೂಗಳ ಕಾರ್ಡುಗಳನ್ನೇ ರದ್ದು ಮಾಡಿರುವುದು, ಈ ಸರ್ಕಾರ ಹಿಂದೂ ವಿರೋಧಿತನ ತೋರಿಸುತ್ತದೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರಕ್ಕೆ ನಿಜವಾಗಿ ನೈತಿಕತೆ ಇದ್ದರೆ, ಅವೈಜ್ಞಾನಿಕವಾಗಿ ರದ್ದು ಮಾಡಿರುವ 11 ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ವಹಿಸಿದ್ದರು.
ಕೃಷ್ಣಪ್ಪ, ಪ್ರಭುಶಂಕರ್, ಪ್ರಜೀಶ್, ಸಿಂಧುವಳ್ಳಿ ಶಿವಕುಮಾರ್, ನಿತ್ಯಾನಂದ, ಡಾ . ಎಸ್ ಎ ನರಸಿಂಹೇಗೌಡ, ಕುಮಾರ್ ಗುರು ಮಲ್ಲಪ್ಪ ಕೆ.ಸಿ, ವಿಜಯೇಂದ್ರ, ಸ್ವಾಮಿ ಗೌಡ, ನೇಹಾ, ಮಂಜುಳಾ, ಭಾಗ್ಯಮ್ಮ, ಗಿರೀಶ್ ಹೆಚ್, ರಘು ಅರಸ್, ರಾಧಾ ಕೃಷ್ಣ, ಎಳನೀರು ರಾಮಣ್ಣ, ದರ್ಶನ್ ಗೌಡ, ಪ್ರದೀಪ್, ಪ್ರಭಾಕರ, ತ್ಯಾಗರಾಜ್, ಹನುಮಂತಯ್ಯ,ಆನಂದ್, ರವೀಶ್, ಚಂದ್ರಶೇಖರ್ ಮತ್ತಿತರರು ಪಾಲ್ಗೊಂಡಿದ್ದರು.


Share this with Friends

Related Post