ನಂಜನಗೂಡು: ಮತದಾನದ ಜಾಗೃತಿ ಮೂಡಿಸುವ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರೆ ಬಲಿಷ್ಠ ರಾಷ್ಟ್ರವನ್ನು ಕಟ್ಟಲು ಸಾದ್ಯ ಎಂದು ವಿದ್ಯಾರ್ಥಿನಿ ಕುಮಾರಿ ಕಾಂಚನ ತಿಳಿಸಿದರು.
ನಂಜನಗೂಡು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಯೋಜಿಸಲಾಗಿದ್ದ
ತಾಲ್ಲೂಕು ಮಟ್ಟದ ರಾಷ್ಟ್ರಿಯ ಮತದಾನ ದಿನಾಚರಣೆ ಅಂಗವಾಗಿ ವಿವಿಧ ಸ್ಪರ್ಧೆಗಳ ವೇಳೆ ಅವರು ಮಾತನಾಡಿದರು.
ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ. ಕೆ ಆರ್ ರಾಘವೇಂದ್ರ ಮಾತನಾಡಿ ಇಂತಹ ಕಾರ್ಯಕ್ರಮಗಳಿಂದ ಸಾರ್ವಜನಿಕರು ಮತದಾನ ಕೇಂದ್ರದ ಕಡೆಗೆ ಹೆಚ್ಚು ಬರಲು ಸಾಧ್ಯ ಎಂದು ತಿಳಿಸಿದರು.
ಇಂತಹ ಜಾಗೃತಿ ಕಾರ್ಯಕ್ರಮಗಳು ಹಬ್ಬದಂತೆ ಆಚರಿಸಬೇಕು ಎಂದು ಹೇಳಿದರು.
ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಡಾ. ಕೆ ಮಾಲತಿ ಮಾತನಾಡಿ ವಿದ್ಯಾರ್ಥಿಗಳು ಕ್ರಿಯಾಶೀಲರಾಗಿ ಸ್ಪರ್ಧೆಗಳಲ್ಲಿ ಭಾಗವಹಿಸಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರ ಸಿ.ಆರ್. ದಿನೇಶ್ ಅವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ತಮ್ಮ ಕುಟುಂಬಗಳಲ್ಲಿ ನೆರೆಹೊರೆಯವರಲ್ಲಿ ಮತದಾನದ ಮಹತ್ವದ ಬಗ್ಗೆ ಅರಿವನ್ನು ಮೂಡಿಸಬೇಕು. ಮತದಾನದ ಅವಶ್ಯಕತೆಯ ಬಗ್ಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಸಂಚಾಲಕರಾದ ಎಚ್. ಕೆ ಸ್ವಾಮಿಗೌಡರು ಕಾರ್ಯಕ್ರಮವನ್ನು ಆಯೋಜಿಸಿದರು. ಉಪನ್ಯಾಸಕರಾದ ಅಶ್ವಥ್ ನಾರಾಯಣ ಗೌಡ, ಲಿಂಗಣ್ಣ ಸ್ವಾಮಿ , ಹೆಚ್.ಕೆ. ಪ್ರಕಾಶ್ ,ಯೋಗೇಶ್ ,ಸನತ್,ಶ್ರೀಧರ್,ಬಿಂದು ಮತ್ತಿತರರು ಉಪಸ್ಥಿತರಿದ್ದರು.