Mon. Dec 23rd, 2024

ಮುಡಾ ಪ್ರಕರಣ:ವಿಚಾರಣೆ ಡಿಸೆಂಬರ್ 10ಕ್ಕೆ ಮುಂದೂಡಿಕೆ

Share this with Friends

ಬೆಂಗಳೂರು: ಮುಡಾ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಡಿ.10ಕ್ಕೆ ಮುಂದೂಡಿದೆ.

ಆರೋಪಿ ದೇವರಾಜು ಪರ ವಕೀಲರು ವಾದ ಮಂಡಿಸಿ, ವಿಭಾಗೀಯ ಪೀಠದಲ್ಲಿ ಡಿ.5 ಕ್ಕೆ ವಿಚಾರಣೆ ಬಾಕಿ ಇದೆ.ಹಾಗಾಗಿ ಅಲ್ಲಿ ವಿಚಾರಣೆ ಮುಕ್ತಾಯದ ನಂತರ ಇಲ್ಲಿ ವಿಚಾರಣೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು,ಅದಕ್ಕೆ ಸ್ನೇಹಮಯಿ ಕೃಷ್ಣ ಪರ ವಕೀಲ ಆಕ್ಷೇಪ ವ್ಯಕ್ತಪಡಿಸಿದರು.

ಆ ಅರ್ಜಿ ಸಂದರ್ಭದಲ್ಲಿ ಇದನ್ನು ಮುಂದೂಡಬೇಕು ಅಂತ ಹೇಳಿಲ್ಲ ಎಂದು ಸ್ನೇಹಮಯಿ ಕೃಷ್ಣ ಪರ ವಕೀಲ ರಾಘವನ್ ತಿಳಿಸಿದರು. ಅಲ್ಲದೇ ಲೋಕಾಯುಕ್ತ ವರದಿ ಪಡೆಯಿರಿ ಎಂದು ರಾಘವನ್ ಮನವಿ ಮಾಡಿದರು. ಅದಕ್ಕೆ ನ್ಯಾಯಾಧೀಶರು, ಇವತ್ತು ಅರ್ಜಿ ವಿಚಾರಣೆ ನಡೆಸುತ್ತಿಲ್ಲ ಹಾಗಾಗಿ ಡಿ.10 ಕ್ಕೆ ಮುಂದೂಡಲಾಗುವುದು ಎಂದು ತಿಳಿಸಿದರು.

ಡಿಸೆಂಬರ್ 10ರ ಮಧ್ಯಾಹ್ನ 2.30 ಕ್ಕೆ ಅರ್ಜಿ ವಿಚಾರಣೆ ಮುಂದೂಡಲಾಗಿದೆ ಆ‌ ದಿನವೇ ವಾದ-ಪ್ರತಿವಾದ ಮುಕ್ತಾಯ ಮಾಡಬೇಕು ಎಂದು ನ್ಯಾಯಾಧೀಶರು ಸೂಚಿಸಿದರು.


Share this with Friends

Related Post