ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರ ಕಾರು ಅಪಘಾತವಾಗಿದ್ದು ಗಾಯಗೊಂಡಿ ದ್ದಾರೆ.
ಮುಂಜಾನೆ 5 ಗಂಟೆ ಸಮಯದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಮರಕ್ಕೆ ಗುದ್ದಿದ್ದು,ಅವರಿಗೆ ಗಂಭೀರ ಗಾಯಗಳಾಗಿದ್ದು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಳಗಾವಿಯ ವಿಜಯ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಲಕ್ಷ್ಮಿ ಅವರಿಗೆ ಬೆನ್ನುಮೂಳೆಯ ಎಲ್1 ಎಲ್4 ಮೂಳೆಯಲ್ಲಿ ಬಲವಾದ ಪೆಟ್ಟಾಗಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸಚಿವೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯ ಡಾ. ರವಿ ಪಾಟೀಲ ತಿಳಿಸಿದ್ದಾರೆ
ಸಚಿವರ ಜೊತೆ ಅವರ ಸಹೋದರ, ಗನ್‌ಮ್ಯಾನ್, ಡ್ರೈವರ್ ಬಂದಿದ್ದಾರೆ,ಅವರಿಗೂ ಗಾಯಗಳಾಗಿದ್ದು, ಎಲ್ಲರಿಗೂ ಚಿಕಿತ್ಸೆ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.