Fri. Apr 11th, 2025

ಅರ್ಹ ಬಿಪಿಎಲ್ ಕಾರ್ಡ್ ದಾರರಿಗೆ ಸಿಎಂ ಭರವಸೆ

Share this with Friends

ಬೆಂಗಳೂರು: ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ ಭಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಕನಕ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಂತರ ಮಾತನಾಡಿದರು.

ಅನ್ನಭಾಗ್ಯ ಯೋಜನೆ
ಕಾರ್ಯಕ್ರಮ ಜಾರಿ ಮಾಡಿದ್ದು ಈ ಸಿದ್ದರಾಮಯ್ಯ. 2017ರಲ್ಲಿ ಒಂದು ರೂಪಾಯಿಗೆ ನೀಡುತ್ತಿದ್ದ ಅಕ್ಕಿಯನ್ನು ಉಚಿತವಾಗಿ ನೀಡಲಾಯಿತು. ಇದನ್ನು ಬಿಜೆಪಿ ಮಾಡಿಲ್ಲ,ಸುಮ್ಮನೆ ಮಾತನಾಡುತ್ತಾರೆ ಎಂದು ಗರಂ ಆಗಿ ನುಡಿದರು.

ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯದಲ್ಲಿ ಇಂಥ ಯೋಜನೆಯನ್ನು ಜಾರಿ ಮಾಡಿದ್ದಾರೆ. ಗುಜರಾತ್, ಮಧ್ಯಪ್ರದೇಶ, ಬಿಹಾರ, ಉತ್ತರ ಪ್ರದೇಶ, ಹರಿಯಾಣ ಎಲ್ಲಿ ಮಾಡಿದ್ದಾರೆ ಹೇಳಿ ಎಂದು ಪ್ರಶ್ನಿಸಿದರು.

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರ ಕೇವಲ ಗ್ಯಾರಂಟಿ ಎನ್ನುತ್ತಿದೆ ತೆರಿಗೆ ಹಣ ಎಲ್ಲಿ ಹೋಗುತ್ತಿದೆ ಎಂದು ಜನರಿಗೆ ಉತ್ತರ ನೀಡಬೇಕು ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಕುಮಾರಸ್ವಾಮಿ ಇರುವಾಗ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದರೆ, ಅವರಿಗೆ ಮಾತನಾಡಲು ಯಾವ ನೈತಿಕ ಹಕ್ಕಿದೆ ಎಂದು ಮರು ಪ್ರಶ್ನಿಸಿದರು.

ನಾವು ಕರ್ನಾಟಕ ರಾಜ್ಯದಿಂದ ಕೇಂದ್ರಕ್ಕೆ 4.50 ಲಕ್ಷ ಕೋಟಿ ತೆರಿಗೆಯನ್ನು ಕಟ್ಟುತ್ತೇವೆ. ನಮಗೆ ವಾಪಸ್ಸು ಬರುವುದು 59 ಸಾವಿರ ಕೋಟಿ ಮಾತ್ರ. ಉಳಿದ ದುಡ್ಡು ಕೇಂದ್ರದಲ್ಲಿಯೇ ಇರುತ್ತದೆ. ಅದನ್ನು ರಾಜ್ಯಕ್ಕೆ ಕೊಡಿಸಲಿ ಬರೀ ಮಾತನಾಡಿದರೆ ಪ್ರಯೋಜನವೇನು ಎಂದು ಸಿಎಂ ಸವಾಲು ಹಾಕಿದರು.

ನಬಾರ್ಡ್ ವತಿಯಿಂದ ಕಳೆದ ವರ್ಷ 5600 ಕೋಟಿ ಸಾಲ ರಾಜ್ಯಕ್ಕೆ ನೀಡಲಾಗಿತ್ತು. ಈ ವರ್ಷ 2340 ಕೋಟಿ ನೀಡಿದ್ದಾರೆ ಇದು ಅನ್ಯಾಯವಲ್ಲವೇ, ಸಾಲದ ಪ್ರಮಾಣವನ್ನು ಶೇ.58 ರಷ್ಟು ಕಡಿಮೆ ಮಾಡಿದ್ದಾರೆ. ಕುಮಾರ ಸ್ವಾಮಿ, ಪ್ರಹ್ಲಾದ ಜೋಷಿಯವರುಗಳು ಕರ್ನಾಟಕದ ಮಂತ್ರಿಗಳಾಗಿ ಏನು ಮಾಡುತ್ತಿದ್ದಾರೆ ಎಂದು ಸಿಎಂ ಪ್ರಶ್ನಿಸಿದರು.


Share this with Friends

Related Post