Wed. Mar 12th, 2025

ಆಧುನಿಕತೆಯಿಂದಾಗಿ ಕೃಷಿ ವ್ಯವಸ್ಥೆ ಹಾಳಾಗಿದೆ:ಅಶೋಕ್

Share this with Friends

ತುಮಕೂರು: ಆಧುನಿಕತೆಯಿಂದಾಗಿ ಕೃಷಿ ವ್ಯವಸ್ಥೆ ಹಾಳಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಬೇಸರ ವ್ಯಕ್ತಪಡಿಸಿದರು.

ಶಿರಾದಲ್ಲಿ ಸ್ಪಟಿಕಪುರಿ ಮಹಾಸಂಸ್ಥಾನದ ಸಹಯೋಗದಲ್ಲಿ ಕೃಷಿ ಇಲಾಖೆ ಹಮ್ಮಿಕೊಂಡಿದ್ದ ವಿಚಾರ ಸಂಕಿರಣ ಉದ್ಘಾಟನೆ ವೇಳೆ‌ ಅವರು ಮಾತನಾಡಿದರು,

ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು ಸತ್ತುಹೋಗಿವೆ,ಮಣ್ಣಿನ ಫಲವತ್ತತೆ ನಾಶವಾಗಿದೆ,ಇದು ನೈಸರ್ಗಿಕ ಕೃಷಿಯ ಮೇಲೆ ಕೆಟ್ಟ ಪರಿಣಾಮ ಬೀರಿದೆ ಎಂದು ವಿಷಾದಿಸಿದರು.

ಚೀನಾದಲ್ಲಿ ಮಣ್ಣಿನ ಫಲವತ್ತತೆಗಾಗಿ ಈಗ ಏಡಿಗಳನ್ನು ಬಳಸಲಾಗುತ್ತಿದೆ. ಮೊದಲಿಗೆ ರಾಸಾಯನಿಕ ಗೊಬ್ಬರವನ್ನು ಚೆನ್ನಾಗಿ ಬಳಸಿ, ಈಗ ರಾಸಾಯನಿಕ ಗೊಬ್ಬರ ಬಳಸುವುದು ಬೇಡ ಎಂದು ಜಾಗೃತಿ ತರಲಾಗುತ್ತಿದೆ.ಈಗ ಎಲ್ಲರೂ ಮತ್ತೆ ಹಿಂದಕ್ಕೆ ಹೋಗುತ್ತಿದ್ದೇವೆ ಎಂದು ಅಶೋಕ್ ಬೇಸರ ಪಟ್ಟರು.

ರಾಜಧಾನಿ ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಹಾಗೆಯೇ ನೀರಿನ ಕೊರತೆಯೂ ಕಂಡುಬರುತ್ತಿದೆ. ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ನೀರಿನ ಕೊರತೆ ಇದೆ. ಆದರೆ ಇಲ್ಲೂ ಮಂಡ್ಯ ಜಿಲ್ಲೆಯಲ್ಲಿ ಮಾಡುವಂತೆ ಕಬ್ಬು ಬೆಳೆಯಲಾಗುತ್ತಿದೆ. ಆದ್ದರಿಂದ ಕೃಷಿ ತಜ್ಞರು, ವಿಜ್ಞಾನಿಗಳು ಹಾಗೂ ಸರ್ಕಾರ ಈ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

ಹಿಂದೆ ಯಾವುದೇ ನೀರು ಕುಡಿದರೂ ಆರೋಗ್ಯ ಕೆಡುತ್ತಿರಲಿಲ್ಲ. ಈಗ ನೀರಿನಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಅನಾರೋಗ್ಯ ಉಂಟಾಗುತ್ತದೆ. ಮಾಲಿನ್ಯದಿಂದಾಗಿ ನೀರು ಹೆಚ್ಚು ಕಲುಷಿತವಾಗಿದೆ ಎಂದು ಹೇಳಿದರು.

ಕೃಷಿ ಕುರಿತಾದ ಜ್ಞಾನ ರೈತ ಕುಟುಂಬಗಳಲ್ಲಿ ಸಹಜವಾಗಿ ಬೆಳೆದುಬಂದಿದೆ. ಹಿಂದಿನ ಕಾಲದಲ್ಲಿ ಯಾವ ರೈತರೂ ಪುಸ್ತಕ ಓದಿ ಕೃಷಿ ಮಾಡುತ್ತಿರಲಿಲ್ಲ ಎಂದು ತಿಳಿಸಿದರು.





Share this with Friends

Related Post