Mon. Dec 23rd, 2024

ಖಾಸಗಿ ಸಂಸ್ಥೆ‌ಯ ಎಫ್ ಎಸ್‌ ಎಲ್ ವರದಿಗೆ ಮಾನ್ಯತೆ ಇಲ್ಲ- ಸಿಎಂ

Share this with Friends

ಶಿರಸಿ, ಮಾ.6: ಖಾಸಗಿ ಸಂಸ್ಥೆಗಳ ಎಫ್ ಎಸ್‌ ಎಲ್ ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ,
ಬಿಜೆಪಿ ಖಾಸಗಿ ಸಂಸ್ಥೆಯೊಂದರ ಎಫ್ ಎಸ್‌ ಎಲ್ ವರದಿ ತಂದಿದೆ,ಆದರೆ
ಖಾಸಗಿ ಸಂಸ್ಥೆ ನೀಡುವ ಎಫ್ ಎಸ್‌ ಎಲ್
ವರದಿಯನ್ನು ಸರ್ಕಾರ ಒಪ್ಪುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದರು.

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಅಧ್ಯತೆಯಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 854 ಕೋಟಿ ರೂ ಪಿಡಿ ಖಾತೆಯಲ್ಲಿದೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಉಚಿತ ಸಹಾಯವಾಣಿ ಆರಂಭಿಸಲಾಗುವುದು ಎಂದು ಹೇಳಿದರು.

ಸಚಿವರು ಮತ್ತು ಶಾಸಕರ ಅಧ್ಯಕ್ಷತೆ ಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಗಳನ್ನು ನಡೆಸಲು‌ ಹಾಗೂ ವಾರಕ್ಕೊಮ್ಮೆ ಪಿಡಿಒ ಗಳು ಮತ್ತು ವಿಎ ಗಳ ಸಭೆ ನಡೆಸುವಂತೆ ಸೂಚನೆ ನೀಡಲಾಗಿದೆ. ಈ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಡಿಸಿ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಎಚ್ಚರಿಸಿದರು.


Share this with Friends

Related Post