Mon. Dec 23rd, 2024

ಜನರ ತೀರ್ಪಿಗೆ ತಲೆ ಬಾಗುತ್ತೇನೆ: ನಿಖಿಲ್

Share this with Friends

ಬಿಡದಿ: ಚನ್ನಪಟ್ಟಣದ ಜನತೆ ನೀಡಿರುವ ತೀರ್ಪಿಗೆ ನಾನು ತಲೆಬಾಗುತ್ತೇನೆ, ಅವರ ಅದೇಶವನ್ನು ಒಪ್ಪಿಕೊಳ್ಳುತ್ತೇನೆ, ಯಾವುದೇ ಕಾರಣಕ್ಕೂ ಕಾರ್ಯಕರ್ತರನ್ನು ಬಿಟ್ಟು ಹೋಗುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಚನ್ನಪಟ್ಟಣ ಚುನಾವಣೆ ಫಲಿತಾಂಶದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್,ಸೋತೆನೆಂದು ಎದೆಗುಂದುವ ಪ್ರಶೆ ಇಲ್ಲ,ಹಾಗೆಂದು ಸುಮ್ಮನೇ ಕೂರುವುದಿಲ್ಲ, ಹೋರಾಟ ಮಾಡುತ್ತೇನೆ ಎಂದು ಹೇಳಿದರು.

ಪ್ರಜಾಪ್ರಭುತ್ವದಲ್ಲಿ ಜನರ ಆದೇಶವೇ ಅಂತಿಮ. ಅವರ ತೀರ್ಪಿಗೆ ತಲೆಬಾಗುತ್ತೇನೆ, ಕ್ಷೇತ್ರದ ಜನತೆ ಜತೆ ನಿರಂತರವಾಗಿ ಇರುತ್ತೇನೆ, ಅವರ ಸೇವೆ ಮಾಡುತ್ತೇನೆ. ನನ್ನ ಪರವಾಗಿ ಚುನಾವಣೆಯಲ್ಲಿ ಹಗಲು ರಾತ್ರಿ ಕೆಲಸ ಮಾಡಿದ ಜೆಡಿಎಸ್ ಬಿಜೆಪಿಯ ಎಲ್ಲಾ ಕಾರ್ಯಕರ್ತರು, ಮುಖಂಡರು ಸೇರಿದಂತೆ ಎಲ್ಲರಿಗೂ ನಮಿಸುತ್ತೇನೆ ಎಂದು ನಿಖಿಲ‌್ ತಿಳಿಸಿದರು.

ಒಂದು ನಿರ್ದಿಷ್ಟ ಸಮುದಾಯದ ಮತಗಳು ಕಾಂಗ್ರೆಸ್ ಪರವಾಗಿ ಕ್ರೋಢೀಕರಣ ಆಗಿವೆ. ಆ ಸಮುದಾಯದ ಪರವಾಗಿಯೂ ನಮ್ಮ ಪಕ್ಷ ಹೋರಾಟ ನಡೆಸಿತ್ತು.ದೇವೇಗೌಡರು ಮೀಸಲಾತಿ ನೀಡಿದ್ದರು. ಅವರಿಗೆ ದೇವೇಗೌಡರು, ಕುಮಾರಸ್ವಾಮಿ ಅವರು ಸಾಕಷ್ಟು ಒಳ್ಳೆಯದು ಮಾಡಿದ್ದಾರೆ. ಆದರೂ ಆ ಸಮುದಾಯ ನಮ್ಮ ಪರ ಮತ ಹಾಕಲಿಲ್ಲ ಎಂದು ನಿಖಿಲ್ ಹೇಳಿದರು.


Share this with Friends

Related Post