Fri. Apr 11th, 2025

ನಕ್ಸಲ್ ವಿಕ್ರಂ ಗೌಡ ಎನ್ ಕೌಂಟರ್: ಸಿಎಂ ಸಮರ್ಥನೆ

Share this with Friends

ಬೆಂಗಳೂರು: ವಿಕ್ರಂಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದರಿಂದ ನಕ್ಸಲ್ ಚಟುವಟಿಕೆ ನಿಗ್ರಹಿಸಲು ಎನ್ ಕೌಂಟರ್ ಮಾಡಲಾಯಿತು ಎಂದು‌ ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡರು

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,ನಕ್ಸಲ್ ಚಟುವಟಿಕೆಯಲ್ಲಿ ಪ್ರಮುಖವಾಗಿ ಭಾಗಿಯಾಗಿದ್ದ ವಿಕ್ರಂಗೌಡ ಎನ್ ಕೌಂಟರ್ ನಲ್ಲಿ ಹತನಾಗಿರುವ ಬಗ್ಗೆ ಪ್ರಗತಿಪರ ಚಿಂತಕರು ಅನುಮಾನ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ವಿಕ್ರಂಗೌಡಾಗೆ ಶರಣಾಗುವಂತೆ ಆದೇಶ ನೀಡಲಾಗಿತ್ತು,ಆದರೆ ಶರಣಾಗಿರಲಿಲ್ಲ. ವಿಕ್ರಂಗೌಡ ಹಿಡಿದವರಿಗೆ ಕೇರಳ ಸರ್ಕಾರ 25 ಲಕ್ಷ ಹಾಗೂ ಕರ್ನಾಟಕ ಸರ್ಕಾರ 5 ಲಕ್ಷ ಬಹುಮಾನ ಘೋಷಿಸಿತ್ತು ಎಂದು ತಿಳಿಸಿದರು.

ಗುರುವಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಲು ಸಮಯ ಕೋರಲಾಗಿದೆ ಎಂದು ಸಿಎಂ ಹೇಳಿದರು.


Share this with Friends

Related Post