Wed. Mar 12th, 2025

ಸಮಾಜಘಾತಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ: ಸಿದ್ದು ಎಚ್ಚರಿಕೆ

Share this with Friends

ಬೆಳಗಾವಿ: ಸಮಾಜಘಾತಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಕಡಕ್ ಎಚ್ಚರಿಕೆ ನೀಡಿದ್ದಾರೆ.

ಮಹಿಳೆಯರಿಗೆ ರಕ್ಷಣೆ ದೊರಕಬೇಕು,
ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು,ಸಮಾಜದಲ್ಲಿ ಸಮಾಜಘಾತಕ ಶಕ್ತಿಗಳು ಇಂಥ ಕೆಲಸ ಮಾಡುತ್ತವೆ ಅಂಥವರ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ಬೆಳಗಾವಿಯಲ್ಲಿ ಮಾಧ್ಯಮದವ ರೊಂದಿಗೆ ಮಾತನಾಡಿದ ಸಿಎಂ,ಇಡೀ ವರ್ಷ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನವನ್ನು ಮಾಡುತ್ತಿದ್ದೇವೆ. ಗಾಂಧೀಜಿಯವರ ತತ್ವಾದರ್ಶಗಳನ್ನು ಮತ್ತೆ ಪುನಸ್ಥಾಪಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗಾಂಧೀಜಿ ಹಾಗು ಅವರ ವಿಚಾರಧಾರೆಗಳು ಇಡೀ ವಿಶ್ವಕ್ಕೆ ಇಂದಿಗೂ ಪ್ರಸ್ತುತ ಎಂದು ತಿಳಿಸಿದರು.

ಗಾಂಧೀಜಿ ಸೌಹಾರ್ದತೆ, ಸಮಾನತೆ ಬರಬೇಕು, ಅಸ್ಪೃಶ್ಯತೆ ಹೋಗಲಾಡಿಸಲು ಮಹಿಳೆಯರಿಗೆ ಸ್ವಾತಂತ್ರ್ಯ ಅವರ ಹಕ್ಕುಗಳ ರಕ್ಷಣೆಯಾಗಬೇಕೆಂದು ಪ್ರತಿಪಾದಿಸಿದ್ದರು.
ಗಾಂಧೀಜಿ, ಬಸವಣ್ಣ, ಕನಕದಾಸರ ವಿಚಾರಗಳು ಸಂವಿಧಾನದಲ್ಲಿ ಅಡಕವಾಗಿವೆ ಎಂದು ಹೇಳಿದರು.

ಗಾಂಧೀಜಿ, ಅಂಬೇಡ್ಕರ್ ಮತ್ತು ಸಂವಿಧಾನವನ್ನು ವಿರೋಧಿಸುವ ಆತಂಕಕಾರಿ ರಾಜಕಾರಣ ನಡೆಯುತ್ತಿದೆ. ಅದ್ದರಿಂದ ಇವುಗಳ ರಕ್ಷಣೆ ಮಾಡುವುದು ಕಾಂಗ್ರೆಸ್ ಜವಾಬ್ದಾರಿ. ನಾವು ಸಂವಿಧಾನದ ಪರವಾಗಿದ್ದೇವೆ. ಅವರು ಮನುವಾದದ ಪರವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.









Share this with Friends

Related Post