Fri. Mar 6th, 2026

ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮಹಿಳೆಗೆ ₹52,000 ಸಂದಾಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Share this with Friends

ಕಾರ್ಕಳ: “ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಯು ಮಹಿಳಾ ಸಬಲೀಕರಣದ ಕ್ರಾಂತಿಗೆ ಮುನ್ನುಡಿ ಬರೆದಿದೆ. ಈವರೆಗೆ ತಲಾ 26 ಕಂತುಗಳಂತೆ ಪ್ರತಿ ಫಲಾನುಭವಿ ಮಹಿಳೆಯ ಖಾತೆಗೆ ಒಟ್ಟು 52,000 ರೂಪಾಯಿ ಹಣವನ್ನು ಯಶಸ್ವಿಯಾಗಿ ಜಮೆ ಮಾಡಲಾಗಿದೆ” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಕಾರ್ಕಳದ ಕುಕ್ಕುಂದೂರಿನಲ್ಲಿ ಕಿಸಾನ್ ಸಭಾ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ನೂತನ ಕಿಸಾನ್ ಸಭಾ ಸಭಾಂಗಣದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು,”ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರವು ಸಾಮಾಜಿಕ ನ್ಯಾಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ‘ಗೃಹಲಕ್ಷ್ಮಿ’ ಯೋಜನೆಯ ಮೂಲಕ ಮಹಿಳಾ ಸಬಲೀಕರಣಕ್ಕೆ ಹೊಸ ಭಾಷ್ಯ ಬರೆದಿದೆ” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಸರ್ಕಾರದ ಸಾಧನೆಯನ್ನು ವಿವರಿಸಿದ ಸಚಿವರು, “ಇದುವರೆಗೆ 1.24 ಕೋಟಿ ಮಹಿಳೆಯರಿಗೆ ಒಟ್ಟು 26 ಕಂತುಗಳ ಹಣವನ್ನು ಯಶಸ್ವಿಯಾಗಿ ತಲುಪಿಸಲಾಗಿದೆ. ಪ್ರತಿ ಫಲಾನುಭವಿ ಮಹಿಳೆಗೆ ತಲಾ 52 ಸಾವಿರ ರೂಪಾಯಿಗಳಂತೆ ಆರ್ಥಿಕ ನೆರವು ನೀಡುವ ಮೂಲಕ ಅವರ ಬದುಕಿಗೆ ಆಸರೆಯಾಗಿದ್ದೇವೆ” ಎಂದು ಹೇಳಿದರು.

ಸ್ಥಳೀಯ ಸಾಧನೆಗೆ ಮೆಚ್ಚುಗೆ:

ರಾಜಕೀಯವಾಗಿ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರಿಲ್ಲದಿದ್ದರೂ, ಗೃಹಲಕ್ಷ್ಮಿ ಯೋಜನೆಯ ಅತಿ ಹೆಚ್ಚು ಫಲಾನುಭವಿಗಳು ಈ ಜಿಲ್ಲೆಯಲ್ಲಿದ್ದಾರೆ ಎಂದು ಅವರು ಹೆಮ್ಮೆಯಿಂದ ತಿಳಿಸಿದರು. ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಉದಯ್ ಕುಮಾರ್ ಶೆಟ್ಟಿ ಅವರು ಮನೆ ಮನೆಗೆ ಭೇಟಿ ನೀಡಿ, ಪ್ರತಿಯೊಬ್ಬ ಅರ್ಹ ಮಹಿಳೆಗೂ ಯೋಜನೆಯ ಲಾಭ ಸಿಗುವಂತೆ ಶ್ರಮಿಸಿರುವುದನ್ನು ಸಚಿವರು ಇದೇ ವೇಳೆ ಶ್ಲಾಘಿಸಿದರು.

RTE ಯೋಜನೆಗೆ ಮೊಯ್ಲಿ ಅವರ ಸಿಇಟಿ ಮಾದರಿ:

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಆಡಳಿತ ವೈಖರಿಯನ್ನು ಶ್ಲಾಘಿಸಿದ ಸಚಿವರು, “ದೇಶ ಕಂಡ ಶ್ರೇಷ್ಠ ರಾಜಕೀಯ ಪಟು ವೀರಪ್ಪ ಮೊಯ್ಲಿ ಅವರು ಬಡ ಮಕ್ಕಳ ಹಿತದೃಷ್ಟಿಯಿಂದ ಜಾರಿಗೆ ತಂದ ‘ಸಿಇಟಿ’ (CET) ವ್ಯವಸ್ಥೆಯು ಇಡೀ ದೇಶಕ್ಕೆ ಮಾದರಿಯಾಗಿದೆ. ಕೇಂದ್ರ ಸರ್ಕಾರದ ಇಂದಿನ ‘ಶಿಕ್ಷಣ ಹಕ್ಕು ಕಾಯ್ದೆ’ಗೆ (RTE) ಮೊಯ್ಲಿ ಅವರು ಆರಂಭಿಸಿದ ಸಿಇಟಿಯೇ ಮೂಲ ಪ್ರೇರಣೆ,” ಎಂದರು. ಅಲ್ಲದೆ, ಮೊಯ್ಲಿ ಅವರು ಆರಂಭಿಸಿದ ಮಹಾತ್ಮ ಗಾಂಧಿ ವಸತಿ ಶಾಲೆಯ ನಿಸ್ವಾರ್ಥ ಸೇವೆಯನ್ನು ಸಚಿವರು ಸ್ಮರಿಸಿದರು.

ಸಂಘಟಿತ ಪ್ರಯತ್ನಕ್ಕೆ ಮೆಚ್ಚುಗೆ:

“ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರಿಲ್ಲದಿದ್ದರೂ, ಅತಿ ಹೆಚ್ಚು ಗೃಹಲಕ್ಷ್ಮಿ ಫಲಾನುಭವಿಗಳು ಇಲ್ಲಿದ್ದಾರೆ. ಕಾರ್ಕಳ ಕ್ಷೇತ್ರದಲ್ಲಿ ಉದಯ್ ಕುಮಾರ್ ಅವರು ಮನೆ ಮನೆಗೆ ತೆರಳಿ ಈ ಯೋಜನೆಯನ್ನು ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ,” ಎಂದು ಶ್ಲಾಘಿಸಿದರು.

ಸೇವೆ ಜೀವನದ ಧ್ಯೇಯವಾಗಲಿ:

“ಸಮಾಜ ಸೇವೆ ಎನ್ನುವುದು ಕೇವಲ ಒಂದು ದಿನದ ಕೆಲಸವಲ್ಲ, ಅದು ಜೀವನದ ಧ್ಯೇಯವಾಗಬೇಕು. ಕಿಸಾನ್ ಸಭಾ ಟ್ರಸ್ಟ್‌ನಂತಹ ಸಂಸ್ಥೆಗಳು ಸಮಾಜಕ್ಕೆ ಬೆಳಕಾಗಲಿ,” ಎಂದು ಹಾರೈಸಿದರು.

 


Share this with Friends

Related Post