Fri. Nov 1st, 2024

14 ಪತಂಜಲಿ ಉತ್ಪನ್ನಗಳ ಲೈಸನ್ಸ್‌ ರದ್ದು

Share this with Friends

ಡೆಹ್ರಾಡೂನ್‌,ಏ.30: ಔಷಧ ಜಾಹೀರಾತು ಕಾನೂನನ್ನು ಪದೇ ಪದೇ ಉಲ್ಲಂಘಿಸಿದ್ದಕ್ಕಾಗಿ ಪತಂಜಲಿಯ 14 ಉತ್ಪನ್ನಗಳ ಲೈಸನ್ಸ್ ರದ್ದುಗೊಳಿಸಲಾಗಿದೆ.

ಬಾಬಾ ರಾಮ್‌ದೇವ್ ಅವರ ದಿವ್ಯ ಫಾರ್ಮಸಿ ಮತ್ತು ಪತಂಜಲಿ ಆಯುರ್ವೇದ್ ಲಿಮಿಟೆಡ್ ವಿರುದ್ಧ ದೂರು ದಾಖಲಿಸಲು ಅನುಮತಿ ನೀಡಿರುವುದಾಗಿ ಉತ್ತರಾಖಂಡ ಸರ್ಕಾರವು ಅಫಿಡವಿಟ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಔಷಧ ಜಾಹೀರಾತು ಕಾನೂನನ್ನು ಪದೇ ಪದೇ ಉಲ್ಲಂಘಿಸಿದ್ದಕ್ಕಾಗಿ ಅವರ 14 ಉತ್ಪನ್ನಗಳ ಉತ್ಪಾದನಾ ಪರವಾನಗಿಯನ್ನು ರದ್ದುಗೊಳಿಸಿದೆ.

ಕಾನೂನಿಗೆ ವಿರುದ್ಧವಾದ ಜಾಹೀರಾತುಗಳನ್ನು ಪ್ರಕಟಿಸಿದರೆ ದಂಡ, ಜೈಲು ಶಿಕ್ಷೆ ಅಥವಾ ಎರಡನ್ನೂ ಒಳಗೊಂಡಂತೆ ಕಠಿಣ ಶಿಸ್ತು ಮತ್ತು ಕಾನೂನು ಕ್ರಮಗಳನ್ನು ರಾಜ್ಯ ಪರವಾನಗಿ ಪ್ರಾಧಿಕಾರವು (ಎಸ್‌ಎಲ್‌ಎ) ತೆಗೆದುಕೊಳ್ಳುತ್ತದೆ ಎಂದು ಉತ್ತರಾಖಂಡ ಸರ್ಕಾರವು ಅಫಿಡವಿಟ್‌ನಲ್ಲಿ ತಿಳಿಸಿದೆ.

ಎಸ್‌ಎಲ್‌ಎ ಏ.15 ರಂದು ದಿವ್ಯ ಫಾರ್ಮಸಿ ಮತ್ತು ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಆದೇಶ ಹೊರಡಿಸಿದ್ದು, ಅದರಲ್ಲಿ ಅವರ 14 ಉತ್ಪನ್ನಗಳಾದ ಸ್ವಸರಿ ಗೋಲ್ಡ್, ಸ್ವಸರಿ ವಟಿ, ಬ್ರಾಂಕೋಮ್, ಸ್ವಸರಿ ಪ್ರವಾಹಿ, ಸ್ವಸರಿ ಅವಳೇಹ್, ಮುಕ್ತಾವತಿ ಎಕ್ಸ್‌ಟ್ರಾ ಪವರ್, ಲಿಪಿಡೋಮ್, ಬಿಪಿ ಗ್ರಿಟ್, ಮಧುಗ್ರಿತ್, ಮಧುನಾಶಿನಿವತಿ ಎಕ್ಸ್‌ಟ್ರಾ ಪವರ್, ಲಿವಾಮೃತ್ ಅಡ್ವಾನ್ಸ್, ಲಿವೋಗ್ರಿಟ್, ಐಗ್ರಿಟ್ ಗೋಲ್ಡ್ ಮತ್ತು ಪತಂಜಲಿ ದೃಷ್ಟಿ ಐ ಡ್ರಾಪ್ ಅನ್ನು ದಿ ಡ್ರಗ್ಸ್ ಅಂಡ್ ಕಾಸ್ಮೆಟಿಕ್ಸ್ ರೂಲ್ಸ್, 1945 ರ ನಿಯಮ 159 (1) ರ ಅಡಿಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಪರವಾನಗಿ ರದ್ದುಗೊಳಿಸಲಾಗಿದೆ ಎಂದು ತಿಳಿಸಲಾಗಿದೆ.


Share this with Friends

Related Post