Mon. Dec 23rd, 2024

HSRP ನಂಬರ್​ ಪ್ಲೇಟ್​​ ಅವಳಡಿಸುವ ಅವಧಿ 3 ತಿಂಗಳು ವಿಸ್ತರಣೆ

Ramalinga-Reddy
Share this with Friends

ಬೆಂಗಳೂರು: HSRP ನಂಬರ್​ ಪ್ಲೇಟ್​​ ಅವಳಡಿಸುವ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಸದಸ್ಯ ಮಧು.ಜಿ ಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯದಲ್ಲಿ ಇದುವರೆಗೂ 18 ಲಕ್ಷ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಇದು ನಡೆಯಬೇಕಾಗಿರುವುದರಿಂದ ಮೂರು ತಿಂಗಳು ವಿಸ್ತರಣೆ ಮಾಡುತ್ತೇವೆ ಎಂದು ಹೇಳಿದರು.

ವಿಧಾನ್​ ಪರಿಷತ್​​ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಮಾದೇಗೌಡ ಅವರು ಮಾತನಾಡಿ “ರಾಜ್ಯದಲ್ಲಿ ಎರಡು ಕೋಟಿಗೂ ಹೆಚ್ಚಿನ ವಾಹನಗಳಿವೆ. ಹಳ್ಳಿ ಜನರು ವಾಹನಗಳಿಗೆ ಇನ್ನೂ ಹೆಚ್​ಎಸ್​ಆರ್​ಪಿ ನೇಮ್ ಪ್ಲೇಟ್ ಅಳವಡಿಸಬೇಕು. ಆನ್​ಲೈನ್​ನಲ್ಲಿ ನೊಂದಣಿ ಮಾಡಬೇಕಿರುವ ಹಿನ್ನೆಲೆಯಲ್ಲಿ ಫೇಕ್​ ವೆಬ್ ಸೈಟ್ ಹಾವಳಿ ಹೆಚ್ಚಾಗಿದೆ ಇದರ ಬಗ್ಗೆ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳಬೇಕು. ಅಲ್ಲದೆ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆಗೆ ಅವಧಿಯನ್ನು ಸರ್ಕಾರ ನೀಡಿರುವ ಗಡುವು ವಿಸ್ತರಿಸಬೇಕು” ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ರಾಮಲಿಂಗಾರೆಡ್ಡಿ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​​ ಅಳವಡಿಸುವ ಗಡುವನ್ನು ಮೂರು ತಿಂಗಳು ವಿಸ್ತರಿಸಲಾಗುತ್ತದೆ. ಇನ್ನು ಫೇಕ್​ ವೆಬ್ ಸೈಟ್ ಬಗ್ಗೆ ಎಚ್ಚರ ವಹಿಸಲಾಗುತ್ತದೆ. ಈ ಯೋಜನೆ ಪಾರದರ್ಶಕವಾಗಿದೆ ಎಂದು ಸದನಕ್ಕೆ ತಿಳಿಸಿದರು. ಅತಿ ಸುರಕ್ಷತಾ ನೋಂದಣಿ ಫಲಕಗಳ ಯೋಜನೆಯನ್ನು ರಾಷ್ಟ್ರೀಯ ಭದ್ರತಾ ದೃಷ್ಟಿಯಿಂದ ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ. ಇದರಿಂದಾಗಿ ವಾಹನಗಳನ್ನು ಬಳಸಿಕೊಂಡು ಅಪರಾಧ ಎಸಗುವುದನ್ನು ತಡೆಗಟ್ಟುವುದರ ಜೊತೆಗೆ ರಸ್ತೆಯ ಮೇಲೆ ಸಂಚರಿಸುವ ಎಲ್ಲ ವಾಹನಗಳನ್ನು ಗುರುತಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಎಚ್‌ಎಸ್‌ಆರ್‌ಪಿ ಎಂದರೆ ಅತಿ ಸುರಕ್ಷಿತ ನೋಂದಣಿ ಫಲಕವಾಗಿದೆ. ಇವುಗಳನ್ನು ಅಲ್ಯೂಮಿನಿಯಂ ಲೋಹದಿಂದ ಮಾಡಿರುತ್ತಾರೆ. ಈ ಪ್ಲೇಟ್‌ನ ಮೇಲ್ಭಾಗದ ಎಡಬದಿಯಲ್ಲಿ ಅಶೋಕ ಚಕ್ರ ಮುದ್ರೆಯ 20X20 ಮಿ.ಮೀ ಅಳತೆಯ ಕ್ರೋಮಿಯಂ ಹೋಲೋಗ್ರಾಮ್‌ ಇರುತ್ತದೆ. ಇಂಗ್ಲಿಷ್ ಅಕ್ಷರಗಳು ಹಾಗೂ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತವೆ. ಈ ನಂಬರ್‌ ಪ್ಲೇಟ್‌ಗಳನ್ನು ಎರಡು ಲಾಕ್‌ ಪಿನ್‌ಗಳನ್ನು ಬಳಸಿ ಅಳವಡಿಸುತ್ತಾರೆ. ಇದರಿಂದ ಒರಿಜಿನಲ್‌ ಯಾವುದು, ನಕಲಿ ಯಾವುದು ಎಂದು ಸುಲಭವಾಗಿ ಗುರುತಿಸಬಹುದು.

ಪಾಕ್ ಹೊಸ ಪ್ರಧಾನಿ ಆಗ್ತಾರಾ ಶೆಹಬಾಜ್ ಷರೀಫ್..?


Share this with Friends

Related Post