Mon. Dec 23rd, 2024

ತುಂಗಾ ನದಿಯಲ್ಲಿ ಈಜಲು ತೆರಳಿದ್ದ 3 ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಸಾವು

Share this with Friends

ಶಿವಮೊಗ್ಗ,ಏ.2: ಈಜಲು ಹೋದ ಮೂವರು ವಿದ್ಯಾರ್ಥಿಗಳು ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಘಟನೆ‌ ತೀರ್ಥಹಳ್ಳಿಯಲ್ಲಿ ನಡೆದಿದ್ದು,
ರಫನ್, ಇಯನ್ ಹಾಗೂ ಸಮ್ಮರ್ ಅಲಿಯಾಸ್ ಅರ್ಫದ್ ಮೃತಪಟ್ಟ ವಿದ್ಯಾರ್ಥಿಗಳು.

ಇವರೆಲ್ಲರೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಾಗಿದ್ದು, ರಂಝಾನ್ ಉಪವಾಸ ಮುಗಿಸಿ ನಂತರ ತುಂಗಾ ನದಿಗೆ ಈಜಲು ಹೋಗಿದ್ದಾಗ,ನೀರಿನಲ್ಲಿ ಮುಳುಗಿ ಹೋಗಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ‌ ತೀರ್ಥಹಳಿ ಪೊಲೀಸರು ಆಗಮಿಸಿ ಮೃತದೇಹಗಳನ್ನು ಹೊರ ತೆಗೆದಿದ್ದಾರೆ.

ರಫನ್, ಇಯನ್ ಮತ್ತು ಅರ್ಫದ್ ಮೃತ ದೇಹಗಳನ್ನು ಹೊರ ತೆಗೆಯುತ್ತಿದ್ದಂತೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನೆ ಸಂಬಂಧ ತೀರ್ಥಹಳ್ಳಿ ಪೂಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


Share this with Friends

Related Post