Mon. Dec 23rd, 2024

ವಯನಾಡು ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ 5 ಲಕ್ಷ ರೂ. ಪರಿಹಾರ: ಸಿಎಂ

Share this with Friends

ಬೆಂಗಳೂರು,ಜು.31: ಕೇರಳದ ವಯನಾಡಿನ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಸಿಎಂ, ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಇದೆ,ಇದು ಅತ್ಯಂತ ಘೋರ ದುರಂತ ಎಂದು ಹೇಳಿದ್ದಾರೆ.

ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡಿರುವುದು ಮತ್ತಷ್ಟು ನೋವುಂಟು ಮಾಡಿದೆ. ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.

ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗಿದೆ. ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ್ಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ.


Share this with Friends

Related Post