Mon. Dec 23rd, 2024

ರೋಹನ್ ಬೋಪಣ್ಣ ಅವರಿಗೆ 50 ಲಕ್ಷ ರೂ ಬಹುಮಾನ

Share this with Friends

ಬೆಂಗಳೂರು, ಫೆ.13:‌ ಆಸ್ಟ್ರೇಲಿಯಾ ಓಪನ್ ಟೆನಿಸ್ ‍ ಪುರುಷರ ಡಬಲ್ಸ್ ವಿಭಾಗದಲ್ಲಿ ಐತಿಹಾಸಿಕ ಸಾಧನೆ ಮಾಡಿದ ರೋಹನ್ ಬೋಪಣ್ಣ ಅವರನ್ನು ಸನ್ಮಾನಿಸಲಾಯಿತು.

ರೋಹನ್ ಬೋಪಣ್ಣ ಅವರನ್ನು ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಲು ಹೊದಿಸಿ ಮೈಸೂರು ಪೇಟ ತೊಡಿಸಿ ಹಾರ ಹಾಕಿ ಸನ್ಮಾನಿಸಿ ಅಭಿನಂದಿಸಿದರು.

ಇದೇ ವೇಳೆ 50 ಲಕ್ಷ ರೂ ಬಹುಮಾನವನ್ನು ಸಿದ್ದರಾಮಯ್ಯ ಘೋಷಿಸಿದರು.

ರೋಹನ್ ಬೋಪಣ್ಣ ಅವರನ್ನು ಸನ್ಮಾನಿಸಿರುವುದಕ್ಕೆ ಬೋಪಣ್ಣ ಮನೆಯವರು ಅತೀವ ಸಂತಸ ವ್ಯಕ್ತಪಡಿಸಿದರು.

ಈ ವೇಳೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ರೋಹನ್ ಬೋಪಣ್ಣ ಮತ್ತು ಮನೆಯವರು ಧನ್ಯವಾದ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಜರಿದ್ದರು.


Share this with Friends

Related Post