Mon. Dec 23rd, 2024

ನೈಋತ್ಯ ರೈಲ್ವೆಯ ಮೈಸೂರು ವಿಭಾಗದಿಂದ 68 ನೆಯ ರೈಲ್ವೆ ಸಪ್ತಾಹ ಆಚರಣೆ

Share this with Friends

ಮೈಸೂರು, ಮಾ.30: ನೈಋತ್ಯ ರೈಲ್ವೆಯ ಮೈಸೂರು ವಿಭಾಗದಿಂದ 68 ನೆಯ ರೈಲ್ವೆ ಸಪ್ತಾಹ ಆಚರಿಸಲಾಯಿತು.

ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ತನ್ನ 68 ನೇ ರೈಲ್ವೆ ಸಪ್ತಾಹದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶಿಲ್ಪಿ ಅಗರ್ವಾಲ್ ಉದ್ಘಾಟಿಸಿ 2022-2023 ರ ಆರ್ಥಿಕ ವರ್ಷದಲ್ಲಿನ ಅಸಾಧಾರಣ ಕಾರ್ಯಕ್ಷಮತೆ ತೋರಿದ ಅತ್ಯುತ್ತಮ ಉದ್ಯೋಗಿಗಳಿಗೆ ಪ್ರಶಸ್ತಿಗಳನ್ನು ನೀಡಿದರು.

ರೈಲ್ವೆಗೆ ಅನುಕರಣೀಯ ಕೊಡುಗೆಗಳನ್ನು ನೀಡಿದ ಒಟ್ಟು 22 ಪರಿಶ್ರಮಿ ಸಿಬ್ಬಂದಿಗಳಿಗೆ ವೈಯಕ್ತಿಕ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.

ಶಿಲ್ಪಿ ಅಗರ್ವಾಲ್ ಅವರು ಮಾತನಾಡಿ,2023-24ನೇ ಸಾಲಿನ ವಿಭಾಗದ ಸಾಧನೆಗಳನ್ನು ತಿಳಿಸಿದರು.ಮೈಸೂರು ವಿಭಾಗವು ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಅಂತರ-ವಿಭಾಗ ರಾಜಭಾಷಾ ಮತ್ತು ಉಳಿಕೆ ವಸ್ತುಗಳ ನಿರ್ವಹಣೆಯಲ್ಲಿನ ಕಾರ್ಯಕ್ಷಮತೆಯಂತಹ ಹಲವಾರು ವಿಭಾಗಗಳಲ್ಲಿ ದಕ್ಷತೆಯ ಫಲಕ ಪಡೆದಿದೆ ಎಂದು ‌ಹೇಳಿದರು.

ಇದೇ ವರ್ಷ ಜನವರಿಯಲ್ಲಿ ಹುಬ್ಬಳ್ಳಿಯ ಪ್ರಧಾನ ಕಛೇರಿಯಲ್ಲಿ ನಡೆದ ‘ವಿಶಿಷ್ಟ ರೈಲು ಸೇವಾ ಪುರಸ್ಕಾರ’ ಕಾರ್ಯಕ್ರಮದಲ್ಲಿ ಪ್ರಮುಖ ನಿಲ್ದಾಣಗಳ ವಿಭಾದದಲ್ಲಿ ಮೈಸೂರು ರೈಲು ನಿಲ್ದಾಣವು ಅತ್ಯುತ್ತಮ ನಿರ್ವಹಣೆಯ ನಿಲ್ದಾಣವೆಂದು ಗುರುತಿಸಲ್ಪಟ್ಟಿದೆ, ಹಾಗೆಯೇ ಬಾಗೇಶಪುರ ರೈಲು ನಿಲ್ದಾಣವು ಪೂರ್ತಿ ನೈಋತ್ಯ ರೈಲ್ವೆಯಲ್ಲಿಯೇ ಅತ್ಯುತ್ತಮವಾಗಿ ನಿರ್ವಹಿಸಲ್ಪಟ್ಟ ಮೈನರ್ (ಸಣ್ಣ) ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.
ಇದಲ್ಲದೆ, 23 ಜನವರಿ 2024 ರಂದು ನಡೆದ ವಿಶಿಷ್ಟ ರೈಲು ಸೇವಾ ಪುರಸ್ಕಾರ ಸಮಾರಂಭದಲ್ಲಿ ಮೈಸೂರು ವಿಭಾಗದ ಏಳು ಉದ್ಯೋಗಿಗಳನ್ನು ವಲಯ ಮಟ್ಟದಲ್ಲಿ ಅವರ ಪ್ರತಿಭಾನ್ವಿತ ಸೇವೆಗಾಗಿ ಶ್ಲಾಘಿಸಿ ಪ್ರಶಸ್ತಿ ನೀಡಲಾಯಿತು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರುಗಳಾದ ವಿನಾಯಕ್ ನಾಯಕ್ ಮತ್ತು ಇ.ವಿಜಯ ಉಪಸ್ಥಿತರಿದ್ದರು.


Share this with Friends

Related Post