Mon. Dec 23rd, 2024

ತೈವಾನ್‌ನಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

Taiwan
Share this with Friends

ತೈಪ. ಎ.1 : ತೈವಾನ್‌ನ ಕರಾವಳಿ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ 7.2 ತೀವ್ರತೆಯ ಭಾರಿ ಭೂಕಂಪವಾಗಿದ್ದು ದಕ್ಷಿಣ ಜಪಾನ್ ಮತ್ತು ಫಿಲಿಪೈನ್ಸ್ ದ್ವೀಪಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ. ತೈವಾನ್‌ನ ಕೇಂದ್ರ ಹವಾಮಾನ ಆಡಳಿತವು ಭೂಕಂಪದ ಕೇಂದ್ರಬಿಂದುವು ತೈವಾನ್ ದ್ವೀಪದ ಪೂರ್ವ ಕರಾವಳಿಯ ನೀರಿನಲ್ಲಿ, ಪೂರ್ವ ಕೌಂಟಿಯ ಹುವಾಲಿಯನ್ ಕರಾವಳಿಯಲ್ಲಿದೆ ಎಂದು ಹೇಳಿದೆ.

ಭೂಕಂಪದಿಂದಾಗಿ ರಾಜಧಾನಿ ತೈಪೆ ಸೇರಿದಂತೆ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಪೂರ್ವ ತೈವಾನ್‌ನಲ್ಲಿ ಹಲವಾರು ಕಟ್ಟಡಗಳು ಕುಸಿದಿವೆ, ಸಾವುನೋವುಗಳ ಬಗ್ಗೆ ಇನ್ನೂ ಯಾವುದೇ ಮಾಹಿತಿ ಇಲ್ಲ.ತೈವಾನ್‌ನಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ.

ತೈವಾನ್ ದೂರದರ್ಶನ ಕೇಂದ್ರಗಳು ಭೂಕಂಪದ ಕೇಂದ್ರದ ಸಮೀಪವಿರುವ ಹುವಾಲಿಯನ್‌ನಲ್ಲಿ ಕೆಲವು ಕುಸಿದ ಕಟ್ಟಡಗಳ ಕೆಳಗೆ ಜನರು ಸಿಕ್ಕಿಬಿದ್ದಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ತೈವಾನ್ ಮತ್ತು ಓಕಿನಾವಾ, ಜಪಾನ್ ಮತ್ತು ಫಿಲಿಪೈನ್ಸ್‌ನಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಜಪಾನ್ ಹವಾಮಾನ ಸಂಸ್ಥೆಯ ಪ್ರಕಾರ, 3 ಮೀಟರ್ ವರೆಗಿನ ಸುನಾಮಿ ಅಲೆಗಳು ಜಪಾನ್‌ನ ನೈಋತ್ಯ ಕರಾವಳಿಯ ದೊಡ್ಡ ಪ್ರದೇಶಗಳನ್ನು ತಲುಪುವ ನಿರೀಕ್ಷೆಯಿದೆ ಎಂದು ಎಚ್ಚರಿಸಿದೆ.


Share this with Friends

Related Post