Mon. Dec 23rd, 2024

ಕಬಿನಿಯಿಂದ 80 ಸಾವಿರ ಕ್ಯೂಸೆಕ್ ನೀರು: ನದಿ ಪಾತ್ರದ ಜನತೆ ಎಚ್ಚರ- ಶಿವಕುಮಾರ್

Share this with Friends

ಮೈಸೂರು,ಜು.31: ನಿರಂತರ ಮಳೆಯಿಂದ ಕಬಿನಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದೆ,
ಜನತೆ ಎಚ್ಚರಿಕೆಯಿಂದ ಇರಬೇಕೆಂದು ನಂಜನಗೂಡು ತಹಸೀಲ್ದಾರ್ ಶಿವಕುಮಾರ್ ಕಾಸ್ನೂರ್ ಮನವಿ ಮಾಡಿದ್ದಾರೆ.

ಕೇರಳದ ವೈನಾಡು ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು ಈಗಾಗಲೇ 60 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಕಪಿಲಾ ನದಿಗೆ ಬಿಡುಗಡೆ ಮಾಡಲಾಗಿದೆ.

ಮಳೆ ಪ್ರಮಾಣ ಹೆಚ್ಚಾದ ಹಿನ್ನಲೆ 80 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಆಗುವ ಸಾಧ್ಯತೆ ಇದೆ.ಹಾಗಾಗಿ ಕಪಿಲಾ ನದಿ ಪಾತ್ರದ ಜನತೆ ಸುರಕ್ಷಿತ ಪ್ರದೇಶಗಳಿಗೆ ತೆರಳಬೇಕೆಂದು ಕಾಸ್ನೂರ್ ಕೋರಿದ್ದಾರೆ.

ಯಾವುದೇ ಕ್ಷಣದಲ್ಲಾದರೂ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ ಮಾಡುಯಾಗಬಹುದು ಆದ್ದರಿಂದ ಜನರು ತಾಲೂಕು ಆಡಳಿತ ಜೊತೆ ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.


Share this with Friends

Related Post