Fri. Mar 6th, 2026

BREAKING: ಹಿರಿಯ ಪತ್ರಕರ್ತ, ಸಂಜೆ ವಾಣಿ ಪತ್ರಿಕೆಯ ವರದಿಗಾರ ದೊಡ್ಡ ಬೊಮ್ಮಯ್ಯ ಇನ್ನಿಲ್ಲ.!

Share this with Friends

ಬೆಂಗಳೂರು : ಬೆಳಗಾವಿ ಅಧಿವೇಶನ ಮುಗಿಸಿ ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ಹಿರಿಯ ಪತ್ರಕರ್ತರು,ಸಂಜೆ ವಾಣಿ ಪತ್ರಿಕೆಯ ವರದಿಗಾರರು ಆಗಿದ್ದ ದೊಡ್ಡ ಬೊಮ್ಮಯ್ಯ ಬಸ್ ನಲ್ಲಿಯೇ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ.

ಅಧಿವೇಶನ ಮುಗಿದ ಹಿನ್ನೆಲೆ ಬೆಳಗ್ಗೆ ಬೆಂಗಳೂರಿಗೆ ವಾಪಸ್ ಆಗಿದ್ದ ದೊಡ್ಡ ಬೊಮ್ಮಯ್ಯ ಮೆಜೆಸ್ಟಿಕ್ ಗೆ ಬಂದು ಮನೆಗೆ ಹೋಗಲು ಬಿಎಂಟಿಸಿ ಬಸ್ ಹತ್ತಿದ್ದರು. ಈ ವೇಳೆ ಬಸ್ ನಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ.

ದೊಡ್ಡಬೊಮ್ಮಯ್ಯ ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರೊಪ್ಪ ಗ್ರಾಮದ ನಿವಾಸಿಯಾಗಿದ್ದಾರೆ. ಬೆಂಗಳೂರಿನಲ್ಲಿ ನೆಲೆಸಿ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸಂಜೆವಾಣಿ, ದೂರದರ್ಶನ, ಆಕಾಶವಾಣಿ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾಗಿದ್ದರು. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಸಿಎಂ,ಡಿಸಿಎಂ ಸಂತಾಪ:

ಪತ್ರಕರ್ತ ದೊಡ್ಡಬೊಮ್ಮಯ್ಯ ನಿಧನಕ್ಕೆ ಸಿಎಂ,ಸಿದ್ಸರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಹಿರಿಯ ಪತ್ರಕರ್ತರು ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಅವರ ನಿಧನವಾರ್ತೆ ನೋವುಂಟು ಮಾಡಿದೆ.ಸಉದೀರ್ಘ 30 ವರ್ಷಗಳ ತಮ್ಮ ವೃತ್ತಿ ಜೀವನದಲ್ಲಿ ಪತ್ರಿಕಾ ಧರ್ಮಕ್ಕೆ ನಿಷ್ಠರಾಗಿದ್ದವರು. ಆಕಾಶವಾಣಿ ಮತ್ತು ದೂರದರ್ಶನದಲ್ಲಿ ಅರೆಕಾಲಿಕ ಸುದ್ದಿ ಸಂಪಾದಕರಾಗಿ, ವಿವಿಧ ಪತ್ರಿಕೆಗಳಲ್ಲಿ ವರದಿಗಾರರಾಗಿ, ಪ್ರೆಸ್‌‍ ಕ್ಲಬ್‌ ಪದಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು.ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

ಹಿರಿಯ ಪತ್ರಕರ್ತರು ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡಬೊಮ್ಮಯ್ಯ ಅವರು ಹೃದಯಾಘಾತದಿಂದ ನಿಧನರಾಗಿರುವುದು ದುಃಖ ತಂದಿದೆ. ‘ಇಂದು ಸಂಜೆʼ ಪತ್ರಿಕೆಯಲ್ಲಿ ವರದಿಗಾರರಾಗಿದ್ದ ದೊಡ್ಡಬೊಮ್ಮಯ್ಯ ಅವರು ಸತತ 30 ವರ್ಷಗಳ ಕಾಲ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ಪತ್ರಿಕೋದ್ಯಮದ ಮೂಲಕ ಜನಪರ ಕೆಲಸಗಳನ್ನು ಮಾಡುತ್ತಿದ್ದ ದೊಡ್ಡಬೊಮ್ಮಯ್ಯ ಅವರ ಕಾರ್ಯವೈಖರಿ ಸದಾ ಸ್ಮರಣೀಯ.ಅವರ ಆತ್ಮಕ್ಕೆ ಶಾಂತಿ ಸಿಗಲಿ, ಹಠಾತ್‌  ನಿಧನದಿಂದ ದುಃಖದಲ್ಲಿರುವ ಕುಟುಂಬಸ್ಥರಿಗೆ ದೇವರು ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಡಿಸಿಎಂ ತಿಳಿಸಿದ್ದಾರೆ.


Share this with Friends

Related Post