Mon. Dec 23rd, 2024

ಪಾಕಿಸ್ಥಾನ್ ಪರ ಘೋಷಣೆ:ಮೈಸೂರಲ್ಲಿ ಕಾಂಗ್ರೆಸ್ ‌ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ

Share this with Friends

ಮೈಸೂರು, ಫೆ.28: ವಿಧಾನಸೌಧದ ಆವರಣದಲ್ಲಿ ಪಾಕಿಸ್ಥಾನ್ ಜಿಂದಾಬಾದ್ ಘೋಷಣೆ ಕೂಗಿದವರನ್ನು ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಸದಸ್ಯರು ಪ್ರತಿಭಟಿಸಿದರು.

ಕಾಂಗ್ರೆಸ್ ಪಕ್ಷದ ನೂತನ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಬೆಂಬಲಿಗರು ವಿಧಾನಸೌಧದ ಆವರಣದಲ್ಲಿ ಪಾಕಿಸ್ಥಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಸದ ನಾಸೀರ್ ಹುಸೇನ್ ಬೆಂಬಲಿಗರು ಕೂಗಿದ ಘೋಷಣೆ ಬಗ್ಗೆ ತನಿಖೆ ಮಾಡಿಸಿ, ದೇಶ ವಿರೋಧಿಗಳನ್ನು ಹೆಡೆಮುರಿ ಕಟ್ಟುವಂತೆ ಆಗ್ರಹಿಸಿದರು.

ಈ ವೇಳೆ ಕಾಂಗ್ರೆಸ್ ಪಕ್ಷದ ಕಚೇರಿಯವರೆಗೆ ಮೆರವಣಿಗೆ ಹೊರಟು ಮುತ್ತಿಗೆ ಹಾಕಲು ಯತ್ನಿಸಿದಾಗ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.


Share this with Friends

Related Post