ದಾವಣಗೆರೆ: ಹಿರಿಯೂರು ಬಸ್ ಅಪಘಾತ ಪ್ರಕರಣ ಕುರಿತು ಸಮಗ್ರ ತನಿಖೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ರದುರ್ಗದ ಹಿರಿಯೂರು ಬಳಿ ನಡೆದ ಬಸ್ ಮತ್ತು ಟ್ರಕ್ ಅಪಘಾತದಲ್ಲಿ ಟ್ರಕ್ ಚಾಲನ ತಪ್ಪಿರುವುದಾಗಿ ಮೇಲ್ನೋಟಕ್ಕೆ ಕಂಡು ಬರುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟ್ರಕ್ ವಿಭಜಕವನ್ನು ದಾಟಿ ಬಸ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 4 ಮಹಿಳೆಯರು ಹಾಗೂ ಒಂದು ಮಗು ಹಾಗೂ ಟ್ರಕ್ ಚಾಲಕ ಸಾವಿಗೀಡಾಗಿದ್ದಾರೆ ಎಂದರು.
ಪ್ರಯಾಣಿಕ ಸೇವೆ ಒದಗಿಸುವ ಎಲ್ಲ ಬಸ್ಸುಗಳು ಎಲ್ಲಾ ಸುರಕ್ಷತೆಯ ಕ್ರಮಗಳನ್ನು ಅನುಸರಿಸುವುದು ಅವಶ್ಯಕವಾಗಿದೆ ಈ ಸಂಬಂಧ ಅಗತ್ಯ ಕ್ರಮ ವಹಿಸಲಾಗುತ್ತದೆ ಈ ಅಪಘಾತದ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದರು.
ಕಾಂಗ್ರೆಸ್ ನ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಲು ಇಂದು ನವದೆಹಲಿಗೆ ತೆರಳುತ್ತಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

