Fri. Mar 6th, 2026

ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸಿಗಲಿದೆ ಇಸ್ಕಾನ್ ಊಟ..!

Share this with Friends

ಬೆಂಗಳೂರು:ರಾಜ್ಯದ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಅತ್ಯುತ್ತಮ ದರ್ಜೆಯ ಆಹಾರವನ್ನು ಒದಗಿಸುವ ಉದ್ದೇಶದಿಂದ ಇಸ್ಕಾನ್ (ISKCON) ಸಂಸ್ಥೆಯ ಮೂಲಕ ಪೌಷ್ಟಿಕ ಆಹಾರ ಪೂರೈಸಲು ಆರೋಗ್ಯ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸರ್ಕಾರಿ ಆಸ್ಪತ್ರೆಗಳ ರೋಗಿಗಳಿಗೆ ಪೌಷ್ಟಿಕ ಹಾಗೂ ಗುಣಮಟ್ಟದ ಆಹಾರ ಪೂರೈಕೆ ನಮ್ಮ ಆದ್ಯತೆ.ನಮ್ಮ ಸರ್ಕಾರದ ಪ್ರಮುಖ ಆಶಯವಾದ ‘ಸಶಕ್ತ ಮತ್ತು ಆರೋಗ್ಯವಂತ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಇಂದು ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದೆ.ರಾಜ್ಯದ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಅತ್ಯುತ್ತಮ ದರ್ಜೆಯ ಆಹಾರವನ್ನು ಒದಗಿಸುವ ಉದ್ದೇಶದಿಂದ ಇಸ್ಕಾನ್ (ISKCON) ಸಂಸ್ಥೆಯ ಮೂಲಕ ಪೌಷ್ಟಿಕ ಆಹಾರ ಪೂರೈಸಲು ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದರು.

ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ಧಾರವಾಡ ಜಿಲ್ಲಾ ಆಸ್ಪತ್ರೆ ಹಾಗೂ ಬೆಂಗಳೂರಿನ ಯಲಹಂಕ, ಕೆ.ಆರ್. ಪುರ ಮತ್ತು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಈ ಸುಧಾರಿತ ಆಹಾರ ಪದ್ಧತಿಯನ್ನು ಜಾರಿಗೆ ತರಲಾಗುತ್ತಿದೆ. ಅದರಂತೆ,‌ರೋಗಿಗಳ ಆರೋಗ್ಯ ಸ್ಥಿತಿಗೆ ಅನುಗುಣವಾಗಿ ಜನರಲ್ ಡಯಟ್, ಥೆರಪಿಟಿಕ್ ಡಯಟ್, ಗರ್ಭಿಣಿಯರು ಮತ್ತು ಬಾಣಂತಿಯರಿಗಾಗಿ ವಿಶೇಷ ಆಹಾರ ಹಾಗೂ ಮಕ್ಕಳಿಗಾಗಿ ಪ್ರತ್ಯೇಕ ಪೌಷ್ಟಿಕ ಆಹಾರವನ್ನು ನೀಡಲಾಗುವುದು ಎಂದರು.

ಶುದ್ಧತೆ ಮತ್ತು ಗುಣಮಟ್ಟಕ್ಕೆ ಹೆಸರಾಗಿರುವ ಇಸ್ಕಾನ್ ಸಂಸ್ಥೆಯ ಮೂಲಕ ಈ ಸೇವೆಯನ್ನು ಒದಗಿಸಲಾಗುತ್ತಿದ್ದು, ಇದಕ್ಕಾಗಿ ₹2,83,47,000/- ಅನುದಾನವನ್ನು ಮೀಸಲಿಡಲಾಗಿದೆ. ಬೆಳಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟ ಸೇರಿದಂತೆ ದಿನದ ವಿವಿಧ ಅವಧಿಗಳಲ್ಲಿ ಸಮತೋಲಿತ ಆಹಾರವನ್ನು ವೈಜ್ಞಾನಿಕ ದರ ಪಟ್ಟಿಯ ಆಧಾರದ ಮೇಲೆ ಪೂರೈಸಲಾಗುವುದು.ಆಸ್ಪತ್ರೆಗೆ ಬರುವ ಪ್ರತಿಯೊಬ್ಬ ರೋಗಿಗೂ ಗುಣಮಟ್ಟದ ಚಿಕಿತ್ಸೆಯ ಜೊತೆಗೆ ಶಕ್ತಿವರ್ಧಕ ಆಹಾರ ಸಿಗುವಂತೆ ಮಾಡಲು ಕ್ರಮವಹಿಸಲಾಗುತ್ತಿದೆ ಎಂದರು.


Share this with Friends

Related Post