Mon. Dec 23rd, 2024

ಕಿರುತೆರೆಗೆ ಟೆನ್ನಿಸ್ ಕೃಷ್ಣ ಎಂಟ್ರಿ

Tennis Krishna
Share this with Friends

ಕನ್ನಡದ ಚಿತ್ರರಂಗದ ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ‘ಲಕ್ಷ್ಮಿ ಟಿಫನ್ ರೂಮ್’ಸೀರಿಯಲ್‌ಗೆ ನಟ ಟೆನ್ನಿಸ್ ಕೃಷ್ಣ ಬಣ್ಣ ಹಚ್ಚಿದ್ದಾರೆ. ‘ಲಕ್ಷ್ಮಿ ಟಿಫನ್ ರೂಮ್’ ಪ್ರಾಜೆಕ್ಟ್‌ನಲ್ಲಿ ಬಹುಮುಖ್ಯ ಪಾತ್ರಕ್ಕೆ ಟೆನ್ನಿಸ್ ಕೃಷ್ಣ ಬಣ್ಣ ಹಚ್ಚಿದ್ದಾರೆ. ಅವರ ಪಾತ್ರಕ್ಕೆ ಭಾರೀ ಪ್ರಾಮುಖ್ಯತೆ ಇದ್ದು, ಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಹೊಸ ಅಲೆಯ ವಿನೂತನ ಧಾರಾವಾಹಿಗಳನ್ನು ಕನ್ನಡಿಗರಿಗೆ ನೀಡುವಲ್ಲಿ ದಿಟ್ಟ ಹೆಜ್ಜೆ ಇಡುತ್ತಿರುವ ವಾಹಿನಿಯು ಇದೀಗ ‘ಲಕ್ಷ್ಮಿ ಟಿಫನ್ ರೂಮ್’ ಎಂಬ ಹೊಸ ಧಾರಾವಾಹಿಯನ್ನು ಪ್ರಸಾರ ಮಾಡಲು ಸಜ್ಜಾಗಿದೆ. ಕನ್ನಡದ ಚಿತ್ರರಂಗದ ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಅವರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.


Share this with Friends

Related Post