Fri. Mar 6th, 2026

ಸಿದ್ಧರಾಮಯ್ಯ ಪೂರ್ಣಾವಧಿ ಸಿಎಂ: ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

Share this with Friends

ಮೈಸೂರು: ರಾಜ್ಯ ರಾಜಕಾರಣದಲ್ಲಿ ದೀರ್ಘಕಾಲದಿಂದ ಸಂಚಲನ ಮೂಡಿಸುತ್ತಿದ್ದ ‘ನಾಯಕತ್ವ ಬದಲಾವಣೆ’ ಅಥವಾ ‘ಅಧಿಕಾರ ಹಂಚಿಕೆ’ಯ ಊಹಾಪೋಹಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಇಂದು ತೆರೆ ಎಳೆದಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಪೂರ್ಣ 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಘೋಷಿಸಿದ್ದಾರೆ. ನಾಯಕತ್ವ ಬದಲಾವಣೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ಸ್ಪಷ್ಟವಾದ ನಿರ್ಧಾರ ಕೈಗೊಂಡಿದೆ. ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಮಾಡುವ ಉದ್ದೇಶ ಪಕ್ಷಕ್ಕಿಲ್ಲ ಮತ್ತು ಈ ಬಗ್ಗೆ ಹೈಕಮಾಂಡ್‌ನಿಂದ ಸ್ಪಷ್ಟವಾದ “ಗ್ರೀನ್ ಸಿಗ್ನಲ್” ದೊರೆತಿದೆ ಎಂದು ಅವರು ತಿಳಿಸಿದ್ದಾರೆ.

“ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಎಂಬುದು ಸದ್ಯಕ್ಕೆ ಸೆಟ್ಲಡ್ ಇಶ್ಯೂ (ಮುಗಿದುಹೋದ ಅಧ್ಯಾಯ). ಈ ಬಗ್ಗೆ ಚರ್ಚೆಗಳು ನಡೆಯುತ್ತಿರುವುದು ಕೇವಲ ಮಾಧ್ಯಮಗಳಲ್ಲಿ ಮಾತ್ರ” ಎಂದರು.

ಮುಡಾ ಪ್ರಕರಣದಲ್ಲಿ ಕ್ಲೀನ್ ಚಿಟ್: ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣದ ಆರೋಪದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ‘ಬಿ’ ರಿಪೋರ್ಟ್ ಅನ್ನು ನ್ಯಾಯಾಲಯ ಅಂಗೀಕರಿಸಿರುವುದು ಅವರ ನೈತಿಕ ಮತ್ತು ರಾಜಕೀಯ ಬಲವನ್ನು ಹೆಚ್ಚಿಸಿದೆ ಎಂದು ಯತೀಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಸ್ತಕ್ಷೇಪದ ಆರೋಪ ನಿರಾಕರಣೆ: ಇಂಧನ ಇಲಾಖೆಯಲ್ಲಿ ತಮ್ಮ ಹಸ್ತಕ್ಷೇಪವಿದೆ ಎಂಬ ಆರೋಪಗಳನ್ನು ಯತೀಂದ್ರ ಸಿದ್ದರಾಮಯ್ಯ ಅವರು ತಳ್ಳಿಹಾಕಿದ್ದಾರೆ. ಸಚಿವ ಕೆ.ಜೆ. ಜಾರ್ಜ್ ಅವರು ತಮ್ಮ ಹಸ್ತಕ್ಷೇಪದಿಂದ ಬೇಸತ್ತು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ವರದಿಗಳು ಕೇವಲ ಮಾಧ್ಯಮಗಳ ಸೃಷ್ಟಿ ಮತ್ತು ಸತ್ಯಕ್ಕೆ ದೂರವಾದವು ಎಂದು ತಿಳಿಸಿದ್ದಾರೆ

 


Share this with Friends

Related Post