Thu. Mar 5th, 2026

ಮಹಾಶಿವರಾತ್ರಿ ಹಬ್ಬ: ಯಶವಂತಪುರ – ಕಲಬುರಗಿ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ

Share this with Friends

ಬೆಂಗಳೂರು: ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯು ಬೆಂಗಳೂರಿನ ಯಶವಂತಪುರ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಿದೆ.

ಫೆಬ್ರವರಿ 13ರಂದು ರೈಲು ಸಂಖ್ಯೆ 06209 ಯಶವಂತಪುರ–ಕಲಬುರಗಿ ವಿಶೇಷ ಎಕ್ಸ್ ಪ್ರೆಸ್ ರೈಲು ಯಶವಂತಪುರದಿಂದ ರಾತ್ರಿ 10:40ಕ್ಕೆ ಹೊರಟು, ಮರುದಿನ ಬೆಳಿಗ್ಗೆ 9:15ಕ್ಕೆ ಕಲಬುರಗಿ ತಲುಪಲಿದೆ.

ಹಿಂದಿರುಗುವ ಪ್ರಯಾಣದಲ್ಲಿ, ಫೆಬ್ರವರಿ 14ರಂದು ರೈಲು ಸಂಖ್ಯೆ 06210 ಕಲಬುರಗಿ-ಯಶವಂತಪುರ  ವಿಶೇಷ ಎಕ್ಸ್ ಪ್ರೆಸ್ ರೈಲು ಕಲಬುರಗಿಯಿಂದ   ಬೆಳಿಗ್ಗೆ 10:15ಕ್ಕೆ ಹೊರಟು, ಅದೇ ದಿನ ರಾತ್ರಿ 9:40ಕ್ಕೆ ಯಶವಂತಪುರ ತಲುಪಲಿದೆ.

ಈ ವಿಶೇಷ ಎರಡೂ ಮಾರ್ಗಗಳಲ್ಲಿ ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣ, ಯಾದಗಿರಿ ಹಾಗೂ ಶಹಾಬಾದ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಈ ವಿಶೇಷ ರೈಲು ಒಟ್ಟು 20 ಬೋಗಿಗಳನ್ನು ಒಳಗೊಂಡಿರಲಿದೆ. ಇದರಲ್ಲಿ ಒಂದು ಪ್ರಥಮ ದರ್ಜೆ ಎಸಿ ಹಾಗೂ ಎಸಿ-2 ಟೈರ್ (ಸಂಯೋಜಿತ), ಎರಡು ಎಸಿ-3 ಟೈರ್, 10 ಸ್ಲೀಪರ್ ಕ್ಲಾಸ್, 5 ಸಾಮಾನ್ಯ ದ್ವಿತೀಯ ದರ್ಜೆ ಹಾಗೂ ಎರಡು ಎಸ್ಎಲ್ಆರ್ ಬೋಗಿಗಳು ಇರಲಿವೆ ಎಂದು ನೈಋತ್ಯ ರೈಲ್ವೆ ಮಾಹಿತಿ ನೀಡಿದೆ.


Share this with Friends

Related Post