ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಮೂರನೇ ಸುತ್ತಿನ ಸೀಟು ಹಂಚಿಕೆಗೆ ಬೆಂಗಳೂರಿನ ಪಾಲಿಕೆಗಳು ಸೇರಿದಂತೆ ಸರ್ಕಾರದ ಇತರ ಆಸ್ಪತ್ರೆಗಳಲ್ಲಿನ ಸೇವಾ ನಿರತ ಅಭ್ಯರ್ಥಿಗಳಿಗೆ ಡಿಎನ್ ಬಿ ಸೀಟುಗಳು ಲಭ್ಯ ಇದ್ದು, ಹಂಚಿಕೆಗೆ ಪರಿಗಣಿಸುವಂತೆ ಸರ್ಕಾರ ಸೂಚಿಸಿರುವ ಹಿನ್ನೆಲೆಯಲ್ಲಿ ಇಚ್ಛೆ/ಆಯ್ಮೆ ದಾಖಲಿಸಲು ಫೆ.18ರಂದು ಮಧ್ಯಾಹ್ನ 12 ಗಂಟೆವರೆಗೆ ದಿನಾಂಕ ವಿಸ್ತರಿಸಲಾಗಿದೆ.
ಲಭ್ಯ ತಜ್ಞತೆಯ ಕೋರ್ಸ್ ಗಳ ಪಟ್ಟಿಯನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು ಅವುಗಳಿಗೆ ಮಾತ್ರ ಸೇವಾ ನಿರತರು ಇಚ್ಛೆ/ಆಯ್ಕೆಗಳನ್ನು ದಾಖಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇಎಸ್ಐಸಿ, ಬೆಂಗಳೂರಿನ ಮಹಾನಗರ ಪಾಲಿಕೆಗಳು, ರಾಜ್ಯದ ಇತರ ಪಾಲಿಕೆಗಳ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು ಸರ್ಕಾರಿ ಆಸ್ಪತ್ರೆ ಗಳಲ್ಲಿನ ಡಿ ಎನ್ ಬಿ ಸೀಟುಗಳ ಪ್ರವೇಶಕ್ಕೆ ಆಪ್ಷನ್ಸ್ ದಾಖಲಿಸಬಹುದು ಎಂದು ಅವರು ವಿವರಿಸಿದ್ದಾರೆ.
ಸೇವಾ ನಿರತರಲ್ಲದೆ ಇತರ ಅಭ್ಯರ್ಥಿಗಳು ಕೂಡ ತಮ್ಮ ಇಚ್ಛೆ/ಆಯ್ಕೆ ಗಳನ್ನು ನಾಳೆವರೆಗೆ ದಾಖಲಿಸಬಹುದು ಎಂದು ಅವರು ತಿಳಿಸಿದ್ದಾರೆ.

