Fri. Mar 6th, 2026

ಒಳಮೀಸಲಾತಿ: ಎಲ್ಲರಿಗೂ ನ್ಯಾಯ ಸಿಗುವಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದ ಸಚಿವರು

Share this with Friends

ಬೆಂಗಳೂರು: ನೇಮಕಾತಿ ತಡವಾದರೆ ಅನೇಕ ಅಭ್ಯರ್ಥಿಗಳಿಗೆ ಅರ್ಹತೆ ಕಳೆದುಕೊಳ್ಳುವ ಹಾಗೂ ಪ್ರಾತಿನಿಧ್ಯಕ್ಕೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ, ಒಟ್ಟು 56,432 ಹುದ್ದೆಗಳನ್ನು ಭರ್ತಿ ಮಾಡಲು ತಕ್ಷಣ ಅಧಿಸೂಚನೆ ಹೊರಡಿಸಿ ಪ್ರಕ್ರಿಯೆ ಆರಂಭಿಸಲು ನಿರ್ಧರಿಸಲಾಗಿದೆ. ಎಲ್ಲ ವರ್ಗಗಳಿಗೂ ಸಮಾನ ಅವಕಾಶ ದೊರಕುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ ಹಾಗೂ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದ್ದಾರೆ.

ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಉಭಯ ಸಚಿವರು,ಸಚಿವ ಸಂಪುಟ ಸಭೆಯಲ್ಲಿ, ಕಳೆದ ಮೂರು-ನಾಲ್ಕು ತಿಂಗಳಿನಿಂದ ನಿಂತಿದ್ದ ಸರ್ಕಾರಿ ನೇಮಕಾತಿ ಪ್ರಕ್ರಿಯೆಯನ್ನು ಮತ್ತೆ ಆರಂಭಿಸುವ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ,6% ನ್ಯಾಯಾಲಯದ ನಿರ್ದೇಶನದಂತೆ ಒಟ್ಟು ಮೀಸಲಾತಿ 50% ಮೀರಬಾರದು ಎಂಬ ನಿಯಮವನ್ನು ಸರ್ಕಾರ ಕಟ್ಟುನಿಟ್ಟಾಗಿ ಪಾಲಿಸುತ್ತದೆ. ಅದರಂತೆ ಎಸ್ಗೆ 15% ಮತ್ತು ಎಸ್‌ಟಿಗೆ 3% ಮೀಸಲಾತಿ ಜಾರಿಗೊಳಿಸಲಾಗುತ್ತದೆ. ಮೊದಲು 17% ಬಗೆ, ತೆಗೆದುಕೊಂಡ ತೀರ್ಮಾನದಲ್ಲಿ ಉಳಿದಿದ್ದ ಅನ್ನು ತಾತ್ಕಾಲಿಕವಾಗಿ ಕಾಯ್ದಿರಿಸಲಾಗಿದೆ. ನ್ಯಾಯಾಲಯದ ಅಂತಿಮ ತೀರ್ಪಿನ ಆಧಾರದ ಮೇಲೆ ಶೇ 6% ಅನ್ನು ಜನರಲ್ ವರ್ಗಕ್ಕೂ ಅಥವಾ ಎಸ್‌ಸಿ/ಎಸ್‌ಟಿ ವರ್ಗಕ್ಕೋ ಹಂಚಿಕೆ ಮಾಡಲಾಗುತ್ತದೆ. (ಅದರಲ್ಲೂ ಎಸ್.ಸಿಗೆ 2% ಮತ್ತು ಎಸ್ಟಿಗೆ 4% ಪರಿಗಣನೆಯಲ್ಲಿದೆ.) ಸರ್ಕಾರ ನ್ಯಾಯಾಲಯದ ಆದೇಶಕ್ಕೆ ಸಂಪೂರ್ಣ ಗೌರವ ನೀಡುತ್ತದೆ ಎಂದಿದ್ದಾರೆ.

ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಕುರಿತು ಸಚಿವ ಸಂಪುಟ ತೀರ್ಮಾನ ಕೈಗೊಂಡಿದ್ದು, ವಿಧಾನಸಭೆ ಮತ್ತು ವಿಧಾನಪರಿಷತ್ತಿನಲ್ಲಿ ಅವಿರೋಧವಾಗಿ ಅಂಗೀಕಾರವಾಗಿದೆ. ವಿವಿಧ ಪಕ್ಷಗಳ ಸದಸ್ಯರು ಸಹಮತ ಸೂಚಿಸಿದ್ದಾರೆ. ನಂತರ ಮಸೂದೆಯನ್ನು ರಾಜ್ಯಪಾಲರಿಗೆ ಕಳುಹಿಸಲಾಗಿದ್ದು, ಅವರು ಕೇಳಿದ ಕೆಲವು ಸ್ಪಷ್ಟಿಕರಣಗಳಿಗೆ ಸರ್ಕಾರ ಉತ್ತರ ನೀಡಿದೆ. ಬಳಿಕ ರಾಜ್ಯಪಾಲರು ಅಂಕಿತ ನೀಡಿ ಮಸೂದೆಯನ್ನು ಸರ್ಕಾರಕ್ಕೆ ಹಿಂತಿರುಗಿಸಿದ್ದಾರೆ ಅದಕ್ಕಾಗಿ ರಾಜ್ಯಪಾಲರಿಗೆ ಸರ್ಕಾರ ಧನ್ಯವಾದಗಳನ್ನು ತಿಳಿಸಿದ್ದೇವೆ. ಈ ನಿರ್ಧಾರದಿಂದ ಸುಮಾರು 35 ವರ್ಷಗಳ ಹೋರಾಟಕ್ಕೆ ನ್ಯಾಯ ಸಿಕ್ಕಂತಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಈಗ 15% ಮಿತಿಯೊಳಗೆ ಒಳ ಮೀಸಲಾತಿಯನ್ನು ಹೇಗೆ ಮತ್ತು ಜಾರಿಗೊಳಿಸಬೇಕು ಎಂಬ ಬಗ್ಗೆ ಸಂಬಂಧಿತ ಸಚಿವರು ಮುಖಂಡರೊಂದಿಗೆ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಡಾ. ಜಿ. ಪರಮೇಶ್ವರ್, ಡಾ. ಹೆಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೊಳಿ, ಪ್ರಿಯಾಂಕ ಖರ್ಗೆ, ಶಿವರಾಜ ತಂಗಡಗಿ ಹಾಗೂ ರುದ್ರಪ್ಪ ಲಮಾಣಿ ಅವರೊಂದಿಗೆ ಚರ್ಚೆ ನಡೆಸಲಾಗಿದೆ. ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯ ಮಂತ್ರಿಗಳಿಗೆ ವಿಷಯ ತಿಳಿಸಲಾಗಿದ್ದು, ಅಧಿಸೂಚನೆ ನಂತರ ಅಂತಿಮ ತೀರ್ಮಾನ ಕೈಗೊಳ್ಳುವಂತೆ ಅವರು ಸೂಚಿಸಿದ್ದಾರೆ ಎಂದರು.

ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಳ್ಳುವ ಮೊದಲು ಒಳ ಮೀಸಲಾತಿ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ. ಯಾವುದೇ ಸಮುದಾಯದವರು ಗೊಂದಲಕ್ಕೀಡಾಗಬಾರದು ಮತ್ತು ಅನಾವಶ್ಯಕ ಹೇಳಿಕೆಗಳನ್ನು ನೀಡಬಾರದು ಎಂದು ಸಚಿವರು ಮನವಿ ಮಾಡಿದ್ದಾರೆ. ಎಲ್ಲರಿಗೂ ನ್ಯಾಯ ಸಿಗುವಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ.

 


Share this with Friends

Related Post