Fri. Nov 1st, 2024

ಪಾಕ್ ಪರ ಘೋಷಣೆಕೂಗಿದವರನ್ನು ಸಮರ್ಥಿಸಿಕೊಂಡವರು ಕ್ಷಮೆ ಕೇಳಲಿ : ಬೊಮ್ಮಾಯಿ.

Basavaraj Bommai
Share this with Friends

ಬೆಳಗಾವಿ,ಮಾ,5 : ವಿಧಾನಸೌಧದ ಆವರಣದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಎಸ್ ಎಲ್ ವರದಿ ಆಧರಿಸಿ ಈಗಾಗಲೇ ಮೂವರನ್ನ ಬಂಧಿಸಿದ್ದು ಈ ಸಂಬಂಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿಯಲ್ಲಿ ಈ ಕುರಿತು ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ದೇಶದ್ರೋಹಿಗಳ ರಕ್ಷಣೆಗೆ ಸಚಿವರು ನಿಂತಿದ್ದರು. ಪಾಕ್ ಪರ ಘೋಷಣೆ ಕೂಗಿದ್ದು ಮಾಧ್ಯಮದಲ್ಲಿ ಸ್ಪಷ್ಟವಾಗಿತ್ತು. ಆದರೂ ಸಹ ಜವಾಬ್ದಾರಿ ಮರೆತು ಸಚಿವರು ಆರೋಪಿಗಳ ಪರ ನಿಂತಿದ್ದರು. ಎಫ್ ಎಸ್ ಎಲ್ ರಿಪೋರ್ಟ್ ಬಂದು ನಾಲ್ಕು ದಿನ ಕಳೆದಿದೆ. ಎನ್ಐಎ ಎಂಟ್ರಿಯಾದ ಬಳಿಕ ಮೂವರನ್ನ ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಸಮರ್ಥನೆ ಮಾಡಿಕೊಂಡವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಅಮ್ಮಾಜೇಶ್ವರಿ ಏತನೀರಾವರಿ ಯೋಜನೆಗೆ ಎರಡನೇ ಬಾರಿಗೆ ಶಂಕುಸ್ಥಾಪನೆ ವಿಚಾರಕ್ಕೆ ಆಕ್ರೋಶ ವ್ಯಕ್ತಪಡಿಸಿದ ಬೊಮ್ಮಾಯಿ, ಸರ್ಕಾರ ಬಂದು 9 ತಿಂಗಳು ಕಳೆದರೂ ಯಾವುದೇ ಹೊಸ ಯೋಜನೆ ರೂಪಿಸಿಲ್ಲ. ನೀರಾವರಿ ಯೋಜನೆಗಳ ನಿರ್ಲಕ್ಷ್ಯ ಮಾಡಿದೆ. ಹಳೆಯ ಯೋಜನೆ ಮತ್ತೆ ಚಾಲನೆ ನೀಡುತ್ತಿದ್ದಾರೆ. ಅಧಿಕಾರಿಗಳು ಮಿಸ್ ಗೈಡ್ ಮಾಡುತ್ತಿದ್ದು, ಮುಖ್ಯಮಂತ್ರಿಗಳು ಇದರ ಪರಿಶೀಲನೆಗೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಬೆಳಗಾವಿಗೆ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆಗಮನ ಹಿನ್ನೆಲೆ ಬೆಳಗಾವಿಯಲ್ಲೇ ಬಿಜೆಪಿ- ಜೆಡಿಎಸ್ ಮೈತ್ರಿಯ ಸೀಟು ಹಂಚಿಕೆ ಬಗ್ಗೆ ಚರ್ಚೆ ಆಗುತ್ತಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಬೆಳಗಾವಿಯಲ್ಲಿ ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ದೆಹಲಿಯಲ್ಲಿ ಆಗಲಿದೆ ಎಂದರು. ಇದೇ ವೇಳೆ ಹಾವೇರಿಯಿಂದ ಸ್ಪರ್ಧೆ ಮಾಡುತ್ತೀರಾ ಎಂಬ ಪ್ರಶ್ನೆಗೆ ನಾನು ಈಗಾಗಲೇ ನನ್ನ ಅಭಿಪ್ರಾಯ ಹೇಳಿದ್ದೇನೆ ಎಂದು ಅವರು ತಿಳಿಸಿದರು.


Share this with Friends

Related Post