Fri. Mar 6th, 2026

ಸಂಘರ್ಷ ಪೀಡಿತ ಕೊಲ್ಲಿ ರಾಷ್ಟ್ರಗಳಲ್ಲಿನ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ: ಸಹಾಯವಾಣಿ ಪ್ರಕಟ

Share this with Friends

ಬೆಂಗಳೂರು: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ಯುದ್ಧದ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ನೆರವಿಗಾಗಿ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತಗಳು ತುರ್ತು ಸಹಾಯವಾಣಿಯನ್ನು ಆರಂಭಿಸಿವೆ.

ಯುದ್ಧ ಪೀಡಿತ ಪ್ರದೇಶಗಳಲ್ಲಿ ಕರ್ನಾಟಕದ ನೂರಾರು ಮಂದಿ ಸಿಲುಕಿರುವ ಆತಂಕವಿದ್ದು, ಅವರ ಸುರಕ್ಷಿತ ವಾಪಸಾತಿಗಾಗಿ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಕೇಂದ್ರಗಳನ್ನು ಸಕ್ರಿಯಗೊಳಿಸಲಾಗಿದೆ. ವಿಶೇಷವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿವಾಸಿಗಳು ಯಾರಾದರೂ ಆ ರಾಷ್ಟ್ರಗಳಲ್ಲಿದ್ದರೆ, ಅವರ ಮಾಹಿತಿಯನ್ನು ನೀಡಲು ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಸಾರ್ವಜನಿಕರಲ್ಲಿ ಕೋರಿದ್ದಾರೆ.

ಸಹಾಯಕ್ಕಾಗಿ ಇಲ್ಲಿ ಸಂಪರ್ಕಿಸಿ:

ಬಾಧಿತ ದೇಶಗಳಲ್ಲಿರುವ ಕನ್ನಡಿಗರ ಮಾಹಿತಿ ನೀಡಲು ಅಥವಾ ನೆರವು ಪಡೆಯಲು ಬೆಂಗಳೂರು ಗ್ರಾಮಾಂತರ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ಸಂಖ್ಯೆ 080-28388005 ಅನ್ನು ಸಂಪರ್ಕಿಸಬಹುದು. ರಾಜ್ಯ ಮಟ್ಟದಲ್ಲಿ ತುರ್ತು ನೆರವಿಗಾಗಿ 1070 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ವಿದೇಶಗಳಲ್ಲಿನ ಕಂಟ್ರೋಲ್ ರೂಂ ಸಂಖ್ಯೆಗಳು:

ಕತಾರ್: 00974-55647502

ಬಹ್ರೇನ್: 00973-39418071

ಜೋರ್ಡಾನ್: 00962-770 422 276

ಓಮನ್: 8007 1234 (ಟೋಲ್ ಫ್ರೀ)

ಇರಾಕ್: +964 771 651 1185

ಕುವೈತ್: +965 65501946

ಪ್ಯಾಲೆಸ್ಟೈನ್: +970 592916418

ಈಗಾಗಲೇ ರಾಜ್ಯ ಸರ್ಕಾರವು ದೆಹಲಿಯ ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂತ್ರಸ್ತರ ರಕ್ಷಣೆಗೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Share this with Friends

Related Post