Mon. Dec 23rd, 2024

ರಾಷ್ಟ್ರೀಯ ಲೋಕ್ ಅದಾಲತ್ ಮಾ.16 ಕ್ಕೆ ಮುಂದೂಡಿಕೆ

Share this with Friends

ಮೈಸೂರು.ಮಾ.6: ಇದೇ ಮಾ.09 ರಂದು ನಡೆಯಬೇಕಾಗಿದ್ದ ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಮಾ.16 ಕ್ಕೆ ಮುಂದೂಡಲಾಗಿದೆ.

ಲೋಕ್ ಅದಾಲತ್‌ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಇಚ್ಛಿಸಿದ್ದಲ್ಲಿ ಮುಂಚಿತವಾಗಿ ಸಂಬoಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲ್ಲೂಕು ಕಾನೂನು ಸೇವೆಗಳ ಸಮಿತಿಗಳಿನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ www.kslsa.kar.nic.in ವೆಬ್‌ಸೈಟ್ ಅಥವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲ್ಲೂಕು ಕಾನೂನು ಸೇವೆಗಳ ಸಮಿತಿಗಳ ಸದಸ್ಯ ಕಾರ್ಯದರ್ಶಿಯವರುಗಳನ್ನು ಸಂಪರ್ಕಿಸಬಹುದಾಗಿದೆ.

ಜತೆಗೆ ಸಹಾಯವಾಣಿ ಸಂ: 1800-425-0131 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ದಿನೇಶ್ ಬಿ.ಜಿ ತಿಳಿಸಿದ್ದಾರೆ.


Share this with Friends

Related Post