Mon. Dec 23rd, 2024

ಒಂದೆರಡು ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ:ಸಿಎಂ ಸಿದ್ದರಾಮಯ್ಯ ಹೇಳಿಕೆ

Share this with Friends

ಬೀದರ್, ಮಾರ್ಚ್ 07 : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಒಂದೆರೆಡು ದಿನಗಳಲ್ಲಿ ಸಿದ್ಧವಾಗಲಿದೆ ಎಂದು ಸಿಎಂ‌ ಸಿದ್ದರಾಮಯ್ಯ ತಿಳಿಸಿದರು.

ಬೀದರ್ ನಲ್ಲಿ ಕಾರ್ಯಕ್ರಮಗಳಲ್ಲಿ ಆಗಮಿಸಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ‌ ಸಿಎಂ,ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿಂದು ಲೋಕಸಭಾ ಚುನಾವಣೆ ವಿಷಯ ಚರ್ಚೆ ಆಗಬಹುದು ಎಂದು ಹೇಳಿದರು.

ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಬಂಧನವಾಗಿಲ್ಲದಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪೊಲೀಸರು,ಎನ್.ಎಸ್. ಜಿ ಹಾಗೂ ಸಿಸಿಬಿ ಹುಡುಕಾಟ ಕೈಗೊಂಡಿದ್ದಾರೆ ಸುಳಿವುಗಳು ದೊರೆತಿದೆ ಎಂದು ಉತ್ತರಿಸಿದರು.

ಬಾಕಿ ಇರುವ ಕಾಮಗಾರಿಗಳ ಬಿಲ್ಲುಗಳ ಪವತಿಗಾಗಿ 50 ಕೋಟಿ ರೂ.ಗಳನ್ನು ಜಿಲ್ಲಾಧಿಕಾರಿ ಗಳಿಗೆ ಒದಗಿಸಲಾಗಿದೆ. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಹಣ ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ: ಹೆಚ್.ಸಿ.ಮಹದೇವಪ್ಪ ಅವರ ಹೇಳಿಕೆಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ ಮಾತನ್ನು ಸಚಿವರು ಪುನರುಚ್ಚರಿಸಿದ್ದಾರೆ ಎಂದು ಸಿಎಂ ಹೇಳಿದರು.


Share this with Friends

Related Post