Sat. Jun 6th, 2026

ಮೊಬೈಲ್ ಮೂಲಕ ‘ಸ್ವಯಂ ಗಣತಿ’ಗೆ ಡಿಜಿಪಿ ಡಾ. ಎಂ.ಎ. ಸಲೀಂ ಚಾಲನೆ

Share this with Friends

ಬೆಂಗಳೂರು: ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ‘ಜನಗಣತಿ 2027’ರ ಅಂಗವಾಗಿ ಹೊಸದಾಗಿ ಪರಿಚಯಿಸಲಾಗಿರುವ ‘ಸ್ವಯಂ ಗಣತಿ’ (Self-Enumeration) ವ್ಯವಸ್ಥೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ. ಎಂ.ಎ. ಸಲೀಂ ಅವರು ಇಂದು ಚಾಲನೆ ನೀಡಿದರು.

ಬುಧವಾರ ತಮ್ಮ ಕಚೇರಿಯಲ್ಲಿ ಮೊಬೈಲ್ ಆಪ್ ಮೂಲಕ ಸ್ವತಃ ತಮ್ಮ ವಿವರಗಳನ್ನು ದಾಖಲಿಸುವ ಮೂಲಕ ಅವರು ಈ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಜನಗಣತಿ ನಿರ್ದೇಶಕರಾದ ರಾಮಚಂದ್ರನ್ ಅವರು ಉಪಸ್ಥಿತರಿದ್ದರು.

ಸರಳ ಮತ್ತು ಸುರಕ್ಷಿತ ವ್ಯವಸ್ಥೆ:

ನಂತರ ಮಾತನಾಡಿದ ಡಿಜಿಪಿ ಸಲೀಂ ಅವರು, “ನಮ್ಮ ಜನಗಣತಿ – ನಮ್ಮ ಅಭಿವೃದ್ಧಿ” ಎಂಬ ಧ್ಯೇಯವಾಕ್ಯದೊಂದಿಗೆ ನಡೆಯುತ್ತಿರುವ ಈ ಪ್ರಕ್ರಿಯೆಯು ಅತ್ಯಂತ ಸರಳವಾಗಿದೆ. ಸಾರ್ವಜನಿಕರು ಯಾವುದೇ ಆತಂಕವಿಲ್ಲದೆ ತಮ್ಮ ಮಾಹಿತಿಯನ್ನು ಸುರಕ್ಷಿತವಾಗಿ ದಾಖಲಿಸಬಹುದು ಎಂದು ತಿಳಿಸಿದರು.

ನಾಗರಿಕರಿಗೆ ಅವಕಾಶ:

2026ರ ಏಪ್ರಿಲ್ 1 ರಿಂದ 15 ರವರೆಗೆ ರಾಜ್ಯದ ಎಲ್ಲಾ ನಾಗರಿಕರು ಅಧಿಕೃತ ಪೋರ್ಟಲ್ se.census.gov.in ಮೂಲಕ ಆನ್‌ಲೈನ್‌ನಲ್ಲಿ ತಮ್ಮ ಮಾಹಿತಿಯನ್ನು ಸ್ವಯಂ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಡಿಜಿಟಲ್ ಇಂಡಿಯಾ ಪರಿಕಲ್ಪನೆಯಡಿ ಈ ವ್ಯವಸ್ಥೆಯು ಜನಗಣತಿ ಪ್ರಕ್ರಿಯೆಯನ್ನು ಮತ್ತಷ್ಟು ವೇಗಗೊಳಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 


Share this with Friends

Related Post