Wed. Dec 25th, 2024

ಮಹಿಳಾ ದಿನಾಚರಣೆ: ಉಚಿತ ಕಣ್ಣಿನ ತಪಾಸಣೆ ಶಿಬಿರ

Share this with Friends

ಮೈಸೂರು, ಮಾ.8: ಮೈಸೂರಿನಲ್ಲಿ
ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗೆ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

ಆದ ಕಾರಣ ದೃಷ್ಟಿ ಇದ್ದವರು ಕಣ್ಣಿನ ರಕ್ಷಣೆಗೆ ಒತ್ತು ನೀಡುವುದು ಅವಶ್ಯ ಎಂದು ಎ. ಎಸ್‌. ಜಿ ಆಸ್ಪತ್ರೆಯ ವೈದ್ಯ ಡಾಕ್ಟರ್ ಮಹೇಶ್ ಕುಮಾರ್ ಹೆಚ್ ಎನ್ ಹೇಳಿದರು.

ನಗರದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಎ. ಎಸ್‌ .ಜಿ ಕಣ್ಣಿನ ಆಸ್ಪತ್ರೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ 50ಕ್ಕೂ ಹೆಚ್ಚು ಮಹಿಳೆಯರಿಗೆ ಉಚಿತ ಕಣ್ಣಿನ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.

ಇಂದಿನ ಒತ್ತಡದ ಜೀವನದಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸದಿರುವುದರಿಂದ ಅನೇಕ ರೋಗಗಳಿಗೆ ತುತ್ತಾಗುವಂತಾಗಿದೆ. ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಕೊಂಡು ಉತ್ತಮ ದೇಹಾರೋಗ್ಯ ಕಾಪಾಡಿಕೊಳ್ಳಬೇಕು. ನಾವು ಆರೋಗ್ಯವಾಗಿದ್ದರೆ ಮಾತ್ರ ಬದುಕಿನಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯ ಎಂದು ತಿಳಿಸಿದರು.

ಡಾ.ಲೂಸಿ ಕಾವೇರಿ,ಡಾ.ವಿನಿ ಬದ್ಲಾನಿ,
ಡಾ.ರೋಷನ್, ಆಪರೇಷನ್ ಮ್ಯಾನೇಜರ್ -ಪ್ರದೀಪ್, ಪ್ರಸಾದ್ ಹಾಗೂ ಮಾರ್ಕೆಟಿಂಗ್ ಮ್ಯಾನೇಜರ್ ಪ್ರದೀಪ್ ರಾವತ್ ಸಮಾಜ ಸೇವಕರಾದ ವಿದ್ಯಾ , ಮಂಜುಳಾ, ಚಾಂದಿನಿ, ನಾಗಶ್ರೀ ಮತ್ತಿತರರು ಹಾಜರಿದ್ದರು.


Share this with Friends

Related Post