Wed. Dec 25th, 2024

ಮಾಜಿ ಕಾರ್ಪೊರೇಟರ್ ಅಯಾಜ್ ಪಂಡು ಸಹೋದರನ ಭೀಕರ ಹತ್ಯೆ

Share this with Friends

ಮೈಸೂರು,ಮಾ.8: ಸಾಂಸ್ಕೃತಿಕ ನಗರಿಯಲ್ಲಿ ಮಾಜಿ ಕಾರ್ಪೊರೇಟರ್ ಅಯಾಜ್ ಪಂಡು ಸಹೋದರನನ್ನು ಭೀಕರವಾಗಿ ಹತ್ಯೆ ಮಾಡಲಾಗಿದ್ದು ಜನ ಬೆಚ್ಚಿಬಿದ್ದಿದ್ದಾರೆ.

ಅಯಾಜ್ ಪಂಡು ಸಹೋದರ ಅಕ್ಮಲ್ ಕೊಲೆಯಾದ ದುರ್ದೈವಿ,
ರಾಜೀವ್ ನಗರ ನಿಮ್ರಾ ಮಸೀದಿ ಬಳಿ ಆರ್ಯ ಬೇಕರಿ ಮುಂಭಾಗ ದುಷ್ಕರ್ಮಿಗಳು ದಾಳಿ ಮಾಡಿ ಹತ್ಯೆ ಗೈದಿದ್ದಾರೆ.

ಇಂದು ರಾತ್ರಿ ಸುಮಾರು‌ 9.30ರಲ್ಲಿ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಅಕ್ಮಲ್ ರನ್ನ ದುಷ್ಕರ್ಮಿಗಳ ತಂಡ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದೆ.

ಕಾರ್ಯಕ್ರಮವೊಂದರಲ್ಲಿ ಫ್ಲೆಕ್ಸ್ ತೆರವು ಮಾಡಿದ ವಿಚಾರದಲ್ಲಿ ಮತ್ತೊಂದು ಗುಂಪಿನ ವರ್ತನೆಯನ್ನ ಖಂಡಿಸಿ ಅಕ್ಮಲ್ ಬಹಿರಂಗವಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ನೀಡಿದ್ದರು, ಇದೇ ವಿಚಾರದಲ್ಲಿ ಕೊಲೆ ನಡೆದಿರಬಹುದೆಂದು ಶಂಕಿಸಲಾಗಿದೆ.

ವಿಷಯ‌ ತಿಳಿಯುತ್ತಿದ್ದಂತೆ ಉದಯಗಿರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.


Share this with Friends

Related Post