Wed. Dec 25th, 2024

ಕಾಂಗ್ರೆಸ್ ಮುಖಂಡ ವಾಸು ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

Share this with Friends

ಬೆಂಗಳೂರು, ಮಾ.9: ಮಾಜಿ ಶಾಸಕರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾದ ವಾಸು ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.

ವಾಸು ಅವರ ನಿಧನದ ಸುದ್ದಿ ಕೇಳಿ ಬಹಳ ನೋವಾಗಿದೆ. ನನ್ನ ಆತ್ಮೀಯರಾಗಿದ್ದ ವಾಸು ಅವರ ಜತೆ ರಾಜಕೀಯ ಪಯಣದಲ್ಲಿ ಉತ್ತಮ ಒಡನಾಟ ಹೊಂದಿದ್ದೆ ಎಂದು ಡಿಕೆಶಿ ಹೇಳಿದ್ದಾರೆ.

ಮೈಸೂರು ಮೇಯರ್ ಆಗಿ, ನಂತರ ಶಾಸಕರಾಗಿ ವಾಸು ಅವರು ಮೈಸೂರು, ಚಾಮರಾಜನಗರ ಭಾಗದಲ್ಲಿ ಪಕ್ಷದ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು,ಅವರ ಅಗಲಿಕೆ ಪಕ್ಷಕ್ಕೆ ಬಹಳ ನಷ್ಟ ತಂದಿದೆ ಎಂದು ತಿಳಿಸಿದ್ದಾರೆ.

ವಾಸು ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.


Share this with Friends

Related Post