Wed. Dec 25th, 2024

ಬರಗಾಲ ನಿರ್ವಹಿಸುವಲ್ಲಿ ಸರಕಾರ ವಿಫಲ:ವಿಜಯೇಂದ್ರ ವಾಗ್ದಾಳಿ

Share this with Friends

ಬೆಂಗಳೂರು,ಮಾ.9: ಬರಗಾಲ ನಿರ್ವಹಿಸುವಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.

ಮಲ್ಲೇಶ್ವರದ ಬಾಬುರಾವ್ ದೇಶಪಾಂಡೆ ಭವನದಲ್ಲಿ ಶನಿವಾರ ವಿಕಸಿತ ಭಾರತ ಎಲ್.ಇ.ಡಿ ಪ್ರಚಾರ ವಾಹನಗಳ ಉದ್ಘಾಟನೆ ಮತ್ತು ಪ್ಎಣಾಳಿಕೆ ಸಲಹಾ ಪತ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ವಿಜಯೇಂದ್ರ ಮಾತನಾಡಿದರು.

ರಾಜ್ಯದಲ್ಲಿ ಭೀಕರ ಬರಗಾಲ ಇದೆ. 800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಬರದ ಸಮಸ್ಯೆಯಿಂದ ಕುಡಿಯುವ ನೀರಿಗೂ ಹಾಹಾಕಾರ ಇದೆ, ಮುಖ್ಯಮಂತ್ರಿಗಳು ತಮ್ಮ ಜವಾಬ್ದಾರಿ ಮರೆತಿದ್ದಾರೆ ಎಂದು ಆರೋಪಿಸಿದರು.

ಕಾಳಜಿ ಇಲ್ಲದ ಸರಕಾರ ಇದು, ದರಿದ್ರ ಸರಕಾರ ಎಂದು ಸಾಮಾನ್ಯ ಜನರು ಹೇಳುತ್ತಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲು ನಗರ ಜಿಲ್ಲಾಧ್ಯಕ್ಷರಿಗೆ ತಿಳಿಸಿದ್ದೇನೆ ಎಂದು ವಿಜಯೇಂದ್ರ ತಿಳಿಸಿದರು.

ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ತಮ್ಮನ್ನು ಸೀಮಿತಗೊಳಿಸಿದ್ದಾರೆ,
ಬೆಂಗಳೂರಿನ ನೀರಿನ ಸಮಸ್ಯೆಯತ್ತ ಗಮನ ಕೊಡದೆ ಕುಡಿಯುವ ನೀರಿನ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಕಿಡಿಕಾರಿದರು.

ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ರಾಜ್ಯ ಉಪಾಧ್ಯಕ್ಷೆ ಮಾಳವಿಕ ಅವಿನಾಶ್,ರಾಜ್ಯ ಕಾರ್ಯದರ್ಶಿ ಅಂಬಿಕಾ ಹುಲಿನಾಯ್ಕರ್, ಪ್ರಕೋಷ್ಠಗಳ ರಾಜ್ಯ ಸಂಚಾಲಕ ಎಸ್. ದತ್ತಾತ್ರೀ,ನಿವೃತ್ತ ಐ.ಎ.ಎಸ್. ಅಧಿಕಾರ ಸಿ. ಸೋಮಶೇಖರ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷಎಸ್. ಹರೀಶ್, ಮುಖಂಡರ ಎಸ್.ವಿ. ರಾಘವೇಂದ್ರ ಮತ್ತಿತರರು ಹಾಜರಿದ್ದರು‌.


Share this with Friends

Related Post