Mon. Dec 23rd, 2024

ಗುತ್ತಿಗೆದಾರರ ಬಿಲ್ ಪಾಸು ಮಾಡಲು ಸತಾಯಿಸುವ ಬಗ್ಗೆ ದೂರು ನೀಡಿದರೆ ತನಿಖೆ

Siddaramaiaha
Share this with Friends

ದಾವಣಗೆರೆ, ಫೆ.3: ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸು ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ ದೂರು ನೀಡಿದರೆ ತನಿಖೆ ಕೈಗೊಂಡು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ‌ ನೀಡಿದ್ದಾರೆ.ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸು ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ‌ 10 ಜಿಲ್ಲೆಗಳ ಗುತ್ತಿಗೆದಾರರು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯಿಸಿ,ಇದರ ಬಗ್ಗೆ ದೂರು ನೀಡಿದರೆ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಆದಷ್ಟು ಶೀಘ್ರದಲ್ಲಿಯೇ ಸಿದ್ಧವಾಗಲಿದೆ,ಸ್ಥಳೀಯ ನಾಯಕರು, ಬ್ಲಾಕ್ ಸಮಿತಿ ಅಧ್ಯಕ್ಷರು, ಶಾಸಕರು, ಸಂಸದರ ಅಭಿಪ್ರಾಯ ಪಡೆದು ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ಸಿಎಂ ತಿಳಿಸಿದರು.

ಅಡ್ವಾಣಿ ಅವರಿಗೆ ಭಾರತ ರತ್ನ ದೊರೆತಿರುವ ಬಗ್ಗೆ ಪ್ರತಿಕ್ರಿಯಿಸಿ, ಖಂಡಿತಾ ಕೊಡಲಿ ಬೇಡ ಎಂದು ನಾವು ಹೇಳಿಲ್ಲ,ನಾನು ತುಮಕೂರು ಸಿದ್ಧಗಂಗಸ್ವಾಮಿಗಳಿಗೆ ಕೊಡಬೇಕು ಎಂದು ತಿಳಿಸಿ ಪತ್ರ ಬರೆದಿದ್ದೆ ಎಂದು ಸಿದ್ದರಾಮಯ್ಯ ಹೇಳಿದರು.


Share this with Friends

Related Post