Thu. Dec 26th, 2024

ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ

Manohar-Lal-Khattar
Share this with Friends

ಚಂಡೀಗಢ: ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ನೀಡಿದ್ದಾರೆ. ಹರ್ಯಾಣದಲ್ಲಿ ರಾಜಕೀಯ ಗೊಂದಲದ ನಡುವೆ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಮಂಗಳವಾರ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬೆಳವಣಿಗೆಯಿಂದ ರಾಜ್ಯದಲ್ಲಿ ಬಿಜೆಪಿ ಮತ್ತು ದುಷ್ಯಂತ್ ಚೌಟಾಲ ಅವರ ಜನನಾಯಕ್ ಜನತಾ ಪಾರ್ಟಿ(ಜೆಜೆಪಿ) ನಡುವಿನ ಮೈತ್ರಿ ಮುರಿದು ಬಿದ್ದಿರುವುದು ಬಹುತೇಕ ಖಚಿತವಾಗಿದೆ. ಸಂಪುಟ ವಿಸರ್ಜಿಸಿ ಪಕ್ಷೇತರ ಶಾಸಕರ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂದು ಹೇಳಲಾಗುತ್ತಿದೆ.

ಲೋಕಸಭೆಗೆ ಖಟ್ಟರ್ :
ಹರ್ಯಾಣದಲ್ಲಿ ಬಿಜೆಪಿ ಮತ್ತು ಜನನಾಯಕ್ ಜನತಾ ಪಕ್ಷ (JJP)ಗಳ ನಡುವೆ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆಯ ಮಾತುಕತೆಯಲ್ಲಿ ಉಂಟಾದ ಭಿನ್ನಾಭಿಪ್ರಾಯಗಳ ನಡುವೆ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಮನೋಹರ್ ಲಾಲ್ ಅವರನ್ನು ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಸಾಧ್ಯತೆ ಇದೆ ಎಂಬ ಊಹಾಪೋಹಗಳು ನಡೆಯುತ್ತಿದ್ದು, ಅದು ನಿಜವಾಗಬಹುದು ಅಥವಾ ಇಲ್ಲದಿರಬಹುದು ಎಂದು ಹೇಳಲಾಗುತ್ತಿದೆ. ಹರಿಯಾಣದಲ್ಲಿ ಉದ್ಭವಿಸಿರುವ ಸಮಸ್ಯೆಗಳ ನಡುವೆ, ಬಿಜೆಪಿ ಕೇಂದ್ರ ನಾಯಕತ್ವವು ಜೆಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಪಕ್ಷದ ಕೇಂದ್ರ ವೀಕ್ಷಕರಾಗಿ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ಅರ್ಜುನ್ ಮುಂಡಾ ಮತ್ತು ಹಿರಿಯ ನಾಯಕ ತರುಣ್ ಚುಗ್ ಅವರನ್ನು ಚಂಡೀಗಢಕ್ಕೆ ಕಳುಹಿಸುತ್ತಿದೆ.


Share this with Friends

Related Post