Sat. Jun 13th, 2026

ಪ್ರಧಾನ್ ರಾಜೀನಾಮೆಗೆ ಆಗ್ರಹ:ಕಾಕ್ರೋಚ್ ಜನತಾ ಪಕ್ಷದಿಂದ ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ

Share this with Friends

ಬೆಂಗಳೂರು:ದೇಶದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ NEET, CBSE ಸೇರಿದಂತೆ ಪ್ರಮುಖ ಸ್ಪರ್ಧಾತ್ಮಕ ಹಾಗೂ ಬೋರ್ಡ್ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಖಂಡಿಸಿ ಮತ್ತು ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜೂನ್ 14ರ ಭಾನುವಾರ ಸಂಜೆ 4 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶಾಂತಿಯುತ ಪ್ರತಿಭಟನಾ ಸಭೆಯನ್ನು ಆಯೋಜಿಸಲಾಗಿದೆ.

ವಿದ್ಯಾರ್ಥಿಗಳ ಭವಿಷ್ಯದ ಪರ ಹೋರಾಟ:

ಕಾಕ್ರೋಚ್ ಜನತಾ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಈ ಪ್ರತಿಭಟನೆಯು ಇತ್ತೀಚಿನ ದಿನಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಪರೀಕ್ಷಾ ಅಕ್ರಮಗಳಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿರುವುದರ ವಿರುದ್ಧ ಧ್ವನಿ ಎತ್ತಲಿದೆ. ವ್ಯವಸ್ಥಿತವಾಗಿ ನಡೆಯುತ್ತಿರುವ ಪೇಪರ್ ಲೀಕ್ ದಂಧೆಯ ಹಿಂದೆ ಇರುವ ಪ್ರಭಾವಿಗಳನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ವಿಧಿಸಬೇಕು ಮತ್ತು ಈ ವೈಫಲ್ಯದ ನೈತಿಕ ಹೊಣೆ ಹೊತ್ತು ಸಂಬಂಧಪಟ್ಟ ಶಿಕ್ಷಣ ಸಚಿವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಲಿದ್ದಾರೆ.

ಸಾರ್ವಜನಿಕ ಬೆಂಬಲಕ್ಕೆ ಕರೆ:

ಪರೀಕ್ಷಾ ಅಕ್ರಮಗಳು ಕೇವಲ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ, ಹಗಲಿರುಳು ಕಷ್ಟಪಟ್ಟು ಮಕ್ಕಳನ್ನು ಓದಿಸುವ ಪೋಷಕರ ಆರ್ಥಿಕ ಮತ್ತು ಮಾನಸಿಕ ನೆಮ್ಮದಿಗೂ ಧಕ್ಕೆ ತರುತ್ತಿವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಸಮುದಾಯದ ಹಿತದೃಷ್ಟಿಯಿಂದ ನಡೆಯುತ್ತಿರುವ ಈ ಬೃಹತ್ ಹೋರಾಟಕ್ಕೆ ನಗರದ ಎಲ್ಲಾ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಣ ತಜ್ಞರು ಹಾಗೂ ಪ್ರಜ್ಞಾವಂತ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಸಂಘಟಕರು ಮನವಿ ಮಾಡಿದ್ದಾರೆ.

 

 


Share this with Friends

Related Post