Tue. Dec 24th, 2024

ಸಿ.ಟಿ.ರವಿಗೆ ಶೋಭಾ ಕರಂದ್ಲಾಜೆ ತಿರುಗೇಟು

Share this with Friends

ಬೆಂಗಳೂರು,ಮಾ.14: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಬಿಜೆಪಿ ಮುಖಂಡ ಸಿ.ಟಿ ರವಿಗೆ ತೆರುಗೇಟು ನೀಡಿದ್ದಾರೆ.

ಪಕ್ಷ ವಿರೋಧಿ, ಗಲಭೆ, ಅವಮಾನ ಮಾಡಿದವರಿಗೆ ಟಿಕೆಟ್ ಸಿಗುವುದಿಲ್ಲ ಎಂಬುದು ಸಾಬೀತಾಗಿದೆ, ಇನ್ನಾದರೂ ಪಾಠ ಕಲಿಯಲಿ ಎಂದು ತಮ್ಮ ವಿರೋಧಿಗಳಿಗೆ ಶೋಭಾಕರಂದ್ಲಾಜೆ ಟಾಂಗ್ ನೀಡಿದ್ದಾರೆ.

ಲೋಕಸಭಾ ಚುನಾವಣೆಗೆ ಬೆಂಗಳೂರು ಉತ್ತರದಿಂದ ಟಿಕೆಟ್ ಪೋಷಣೆ ಯಾದ ಬೆನ್ನಲ್ಲೇ ಶೋಭಾ ಕರಂದ್ಲಾಜೆ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿ,ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಿ.ಟಿ.ರವಿ ವಿರುದ್ಧ ಪರೋಕ್ಷ ಟಾಂಗ್ ನೀಡಿದ ಅವರು, ಉಡುಪಿ- ಚಿಕ್ಕಮಗಳೂರಲ್ಲಿ ಬಹಳ ಅಭಿವೃದ್ಧಿ ಕೆಲಸ ಆಗಿದೆ, ಆದರೆ ಅದನ್ನು ಪರಿಗಣಿಸದೇ ಕೆಲವರು ವಿರೋಧ ಮಾಡಿದ್ದರು, ಪ್ರಾಯೋಜಿತ ಗುಂಪು ತಮಗೆ ಟಿಕೆಟ್ ಬೇಕೆಂಬ ಕಾರಣಕ್ಕೆ ಏನೇನೋ ಮಾಡಿತ್ತು. ಆದರೆ ಅವರು ಯಶಸ್ವಿಯಾಗಿಲ್ಲ, ಅವರಿಂದಲೂ ಟಿಕೆಟ್ ತಗೊಂಡು ಬರೋಕೆ ಆಗಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಒಂದು ಶಿಸ್ತಿನ ಪಕ್ಷ, ಈ ರೀತಿ ಪಕ್ಷಕ್ಕೆ ಅವಮಾನ ಮಾಡಿದರೆ ಮಣೆ ಹಾಕಲ್ಲ ಅಂತಾ ವರಿಷ್ಠರು ತೋರಿಸಿಕೊಟಿದ್ದಾರೆ. ಇದರಿಂದ ನನಗೆ ನಿಜಕ್ಕೂ ಆನಂದವಾಗಿದೆ, ನಾನು ಬೆಂಗಳೂರಲ್ಲಿ ಶಾಸಕಿಯಾಗಿ ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ನಾನು ಸದಾನಂದಗೌಡರ ಮನೆಗೆ ಹೋಗಿ ಬಂದಿದ್ದೇನೆ. ಎಲ್ಲರ ಆಶೀರ್ವಾದ ನನ್ನ ಮೇಲಿದೆ ಎಂದು ಶೋಭಾ ಹೇಳಿದರು.

ನನಗೆ ನನ್ನ ನಾಯಕತ್ವದ ಮೇಲೆ, ರಾಷ್ಟ್ರೀಯ ನಾಯಕರ ಮೇಲೆ ವಿಶ್ವಾಸ ಇತ್ತು. ಪಕ್ಷ ಕೊಟ್ಟ ಎಲ್ಲ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ. ಉಡುಪಿ- ಚಿಕ್ಕಮಗಳೂರು ಜಿಲ್ಲೆಯಲ್ಲೂ ಅಭಿವೃದ್ಧಿ ಆಗಿತ್ತು. ಆದರೆ ಕೆಲವರು ಸಹಿಸಲಿಲ್ಲ, ತಮಗೆ ಟಿಕೆಟ್ ಬೇಕೆಂದು ಕೆಲವರು ಏನೇನೊ ಮಾಡಿಸಿದರು, ಅವರು ಯಶಸ್ವಿ ಆಗಲಿಲ್ಲ, ರಾಷ್ಟ್ರೀಯ ನಾಯಕರು ಅದನ್ನೆಲ್ಲ ಪರಿಗಣಿಸಲ್ಲ ಎಂದು ಶೋಭಾ ಹೇಳಿದರು.


Share this with Friends

Related Post