Wed. Dec 25th, 2024

ಸಿಎಎ ಹಿಂಪಡೆಯುವುದಿಲ್ಲ-ಗೃಹ ಸಚಿವ ಅಮಿತ್ ಶಾ ಸ್ಪಷ್ಟ ನುಡಿ

Share this with Friends

ನವದೆಹಲಿ,ಮಾ.14: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯನ್ನ ಹಿಂಪಡೆಯುವ ಮಾತೇ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಡಕ್ಕಾಗಿ ಹೇಳಿದ್ದಾರೆ.

ಕೇಂದ್ರ ಸರ್ಕಾರ ಸಿಎಎ ಜಾರಿಗೊಳಿಸಿ ಅಧಿಸೂಚನೆ ಹೊರಡಿಸಿದ್ದು, ಸಿಎಎಯನ್ನ ಇಡೀ ದೇಶದಲ್ಲಿ ಜಾರಿಗೆ ತಂದಿದೆ. ಆದರೆ ವಿರೋಧ ಪಕ್ಷಗಳು ಸಿಎಎ ವಿರುದ್ಧ ನಿರಂತರವಾಗಿ ಧ್ವನಿ ಎತ್ತುತ್ತಿವೆ. ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲ, ಸಿಎಎ ಹಿಂಪಡೆಯುವ ಮಾತೇ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಸಿಎಎ ಮೂಲಕ ಮತಗಳನ್ನು ಪಡೆಯುವ ತಂತ್ರ ಎಂಬ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ ಅಮಿತ್ ಶಾ, ಈ ರೀತಿ ಹೇಳುವುದು ಅವರ ಇತಿಹಾಸ, ಆದರೆ ಸಿಎಎ ಜಾರಿಗೆ ತಂದಿರುವುದು ಮೋದಿ ಇತಿಹಾಸ, ಮೋದಿಯವರ ಪ್ರತಿ ಭರವಸೆಯೂ ಈಡೇರಿದೆ ಎಂದು ತಿಳಿಸಿದ್ದಾರೆ.

ಅಲ್ಪಸಂಖ್ಯಾತರು ಅಥವಾ ಯಾವುದೇ ವ್ಯಕ್ತಿ ಭಯಪಡುವ ಅಗತ್ಯವಿಲ್ಲ ಏಕೆಂದರೆ ಯಾರೊಬ್ಬರ ಪೌರತ್ವವನ್ನು ಕಸಿದುಕೊಳ್ಳಲು ಸಿಎಎಯಲ್ಲಿ ಯಾವುದೇ ಅವಕಾಶವಿಲ್ಲ. ಸಿಎಎ ಹಿಂದೂಗಳು, ಬೌದ್ಧರು, ಜೈನರು, ಸಿಖ್ಖರು, ಕ್ರಿಶ್ಚಿಯನ್ನರು ಮತ್ತು ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಪಾರ್ಸಿ ನಿರಾಶ್ರಿತರಿಗೆ ಹಕ್ಕು ಮತ್ತು ಪೌರತ್ವವನ್ನು ನೀಡಲು ಮಾತ್ರ ಇರುವುದು ಎಂದು ಅಮಿತ್ ಶಾ ಹೇಳಿದ್ದಾರೆ.


Share this with Friends

Related Post