Sat. Nov 2nd, 2024

ಪೆಟ್ರೋಲ್‌ ಮತ್ತು ಡೀಸೆಲ್‌ ದರದಲ್ಲಿ ಲೀಟರ್‌ಗೆ 2 ರೂ. ಇಳಿಕೆ

Petrol And Diesel Price
Share this with Friends

ನವದೆಹಲಿ : ಪೆಟ್ರೋಲ್‌ ಮತ್ತು ಡೀಸೆಲ್‌ ದರವನ್ನು ಲೀಟರ್‌ಗೆ 2 ರೂಪಾಯಿ ಇಳಿಸುವ ಮಹತ್ವದ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಎಕ್ಸ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 2 ರೂಪಾಯಿ ಇಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಕೋಟ್ಯಂತರ ಭಾರತೀಯರ ತಮ್ಮ ಪರಿವಾರದ ಕಲ್ಯಾಣ ಮತ್ತು ಅನುಕೂಲವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಯಾವಾಗಲೂ ಅದು ಅವರ ಗುರಿಯಾಗಿದೆ” ಎಂದಿದ್ದಾರೆ.

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ತೈಲ ಮಾರುಕಟ್ಟೆ ಕಂಪನಿಗಳು ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಿರುವುದಾಗಿ ತಿಳಿಸಿವೆ. ಹೊಸ ಬೆಲೆಗಳು ಮಾರ್ಚ್ 15, 2024 ರಿಂದ ಬೆಳಿಗ್ಗೆ 6 ರಿಂದ ಜಾರಿಗೆ ಬರುತ್ತವೆ ಎಂದು ತಿಳಿಸಿದ್ದಾರೆ.

ಕಡಿಮೆಯಾದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ನಾಗರಿಕರಿಗೆ ಹೆಚ್ಚು ಆದಾಯ, ಪ್ರವಾಸೋದ್ಯಮ ಮತ್ತು ಪ್ರಯಾಣ ಉದ್ಯಮಗಳಿಗೆ ಉತ್ತೇಜನ ಮತ್ತು ಹಣದುಬ್ಬರ ನಿಯಂತ್ರಣದ ಮೂಲಕ ಪ್ರಯೋಜನವನ್ನು ನೀಡುತ್ತದೆ ಎಂದು ಸಚಿವಾಲಯ ಹೇಳಿದೆ.


Share this with Friends

Related Post