ಬೆಂಗಳೂರು: ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ 2022ರ ನವೆಂಬರ್ 19ರಂದು 7ನೇ ವೇತನ ಆಯೋಗ ರಚಿಸಲಾಗಿತ್ತು ಬಳಿಕ ಅವಧಿಯನ್ನು 2023 ಮೇ 15ರಿಂದ ನವೆಂಬರ್ 18ರವರೆಗೆ ವಿಸ್ತರಿಸಲಾಗಿತ್ತು. ನಂತರ 2ನೇ ಬಾರಿ ಇದೇ ಮಾರ್ಚ್ 15ರವರೆಗೆ ವಿಸ್ತರಿಸಲಾಗಿತ್ತು. ಇಂದು ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ ಮಾಡಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತು ಅಧ್ಯಯನ ಮಾಡಿ, ವರದಿ ಸಲ್ಲಿಸಲು ರಚಿಸಲಾಗಿದ್ದ 7ನೇ ವೇತನ ಆಯೋಗದ ಅವಧಿ ಮಾ.15ಕ್ಕೆ ಮುಕ್ತಾಯವಾಗಿದ್ದು, ಇಂದು ಬೆಳಗ್ಗೆ ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಕೆ ಮಾಡಿದರು.
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 7ನೇ ವೇತನ ಆಯೊಗದ ವರದಿಯಲ್ಲಿ ಹಲವಾರು ಶಿಫಾರಸ್ಸುಗಳಿವೆ. ಅವುಗಳಲ್ಲಿ ಪ್ರಮುಖವಾಗಿ ಸರ್ಕಾರಿ ನೌಕರರ ವೇತನವನ್ನು ಶೇ.27.5ರಷ್ಟು ಹೆಚ್ಚಿಸಬೇಕು ಎಂಬುದು ಸೇರಿದೆ. ಆಯೋಗದ ಶಿಫಾರಸ್ಸನ್ನು ಆರ್ಥಿಕ ಇಲಾಖೆ ಪರಿಶೀಲನೆ ನಡೆಸಿ ಸರ್ಕಾರಕ್ಕೆ ಸಲಹೆ ನೀಡಲಿದೆ. ಆ ಬಳಿಕ ವರದಿ ಅನುಷ್ಠಾನಗೊಳ್ಳಲಿದೆ ಎಂದು ತಿಳಿಸಿದರು.
2022ರ ನವೆಂಬರ್ 19ರಂದು ರಾಜ್ಯ ಸರ್ಕಾರ 7ನೇ ವೇತನ ಆಯೋಗವನ್ನು ರಚನೆ ಮಾಡಿತ್ತು. ಮಧ್ಯಂತರ ವರದಿಯಲ್ಲಿ ಸರ್ಕಾರಿ ನೌಕರರ ಮೂಲ ವೇತನದಲ್ಲಿ ಶೇ.17ರಷ್ಟನ್ನು ಹೆಚ್ಚಳ ಮಾಡಿ ಹಿಂದಿನ ಸರ್ಕಾರ ಆದೇಶ ಹೊರಡಿಸಿತ್ತು. ಇಂದು ಸಲ್ಲಿಕೆಯಾಗಿರುವ ಅಂತಿಮ ವರದಿ ಅನುಷ್ಠಾನಕ್ಕೆ ಬರುವವರೆಗೂ ಶೇ.17ರ ಪ್ರಮಾಣ ಮಧ್ಯಂತರ ಪರಿಹಾರ ಮುಂದುವರೆಯಲಿದೆ ಎಂದು ಹೇಳಿದರು.
ಆಯೋಗಕ್ಕೆ ಅಂತಿಮ ವರದಿ ನೀಡಲು ಈಗಾಗಲೇ ಮೂರು ತಿಂಗಳ ಕಾಲಾವಕಾಶ ವಿಸ್ತರಣೆ ಮಾಡಲಾಗಿತ್ತು. ನಿನ್ನೆಗೆ ಅದು ಮುಕ್ತಾಯಗೊಂಡಿದೆ. ತಾವು ನಿನ್ನೆ ಮೈಸೂರಿನಲ್ಲಿ ಇದ್ದುದ್ದರಿಂದ ವರದಿ ಪಡೆದುಕೊಳ್ಳಲಾಗಿರಲಿಲ್ಲ. ಇಂದು ವರದಿ ಸ್ವೀಕರಿಸಿದ್ದೇನೆ. ಅಂತಿಮ ವರದಿಯಲ್ಲಿ ಕನಿಷ್ಠ ಮೂಲ ವೇತನವನ್ನು 17 ಸಾವಿರದಿಂದ 27 ಸಾವಿರ ರೂ.ಗೆ ಹೆಚ್ಚಿಸಬೇಕೆಂದು ಶಿಫಾರಸ್ಸು ಮಾಡಲಾಗಿದೆ. ಉಳಿದಂತೆ ಹಲವು ಶಿಫಾರಸ್ಸುಗಳ ಬಗ್ಗೆ ಆರ್ಥಿಕ ಇಲಾಖೆ ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದರು.
ಆಯೋಗದ ಅಧ್ಯಕ್ಷರಾಗಿದ್ದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರು ವರದಿ ಬಗ್ಗೆ ಮಾಹಿತಿ ನೀಡಿದ್ದು, ಮೂಲ ವೇತನದಲ್ಲಿ ಶೇ.27.5ರಷ್ಟು ವೇತನ ಹೆಚ್ಚಳಕ್ಕೆ ಶಿಫಾರಸ್ಸು ಮಾಡಲಾಗಿದೆ. ಈಗಾಗಲೇ ಜಾರಿಯಲ್ಲಿರುವ ಶೇ.17ರಷ್ಟು ವೇತನ ಪರಿಷ್ಕರಣೆ ಅಂತಿಮ ವರದಿ ಜಾರಿಯಾದ ಬಳಿಕ ಸ್ಥಗಿತಗೊಳ್ಳಲಿದೆ. ಒಟ್ಟಾರೆ. 27.5ರ ಒಳಗಿನ ಪ್ರಮಾಣದಲ್ಲಿ ಸರ್ಕಾರ ವೇತನ ಪರಿಷ್ಕರಣೆ ಮಾಡಬಹುದು ಎಂದು ಹೇಳಿದರು.
ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವರದಿ ಸಲ್ಲಿಸಿತು. ಆಯೋಗದ ಸದಸ್ಯರಾದ ಪಿ.ಬಿ. ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ , ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕಾ ಡಾ.ಕೆ.ವಿ. ತ್ರಿಲೋಕಚಂದ್ರ, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಹೆಫ್ಸಿಬಾರಾಣಿ ಕೊರ್ಲಪಾಟಿ ಉಪಸ್ಥಿತರಿದ್ದರು .