Tue. Dec 24th, 2024

ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್:ಏಪ್ರಿಲ್ 19 ರಿಂದ 7 ಹಂತಗಳಲ್ಲಿ ಮತದಾನ

Share this with Friends

ನವದೆಹಲಿ,ಮಾ.16: ಇಡೀ ದೇಶ ತೀವ್ರ ಕೂತುಹಲದಿಂದ ಕಾಯುತ್ತಿದ್ದ ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು,
ಏಪ್ರಿಲ್ 19 ರಿಂದ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ.

ಕೇಂದ್ರ ಚುನಾವಣಾ ಆಯೋಗ, 2024ರ ಲೋಕಸಭೆ ಚುನಾವಣೆಗೆ ಶನಿವಾರ ಮುಹೂರ್ತ ಫಿಕ್ಸ್ ಮಾಡಿದ್ದು,
ಏಪ್ರಿಲ್ 19 ರಿಂದ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಇಂದು ದೆಹಲಿಯ ವಿಜ್ಞಾನಭವನದಲ್ಲಿ ಹೊಸದಾಗಿ ನೇಮಕಗೊಂಡ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಚುನಾವಣೆ ಬಗ್ಗೆ ಮಾಹಿತಿ ನೀಡಿದರು.

ನಾವು ಭಾರತೀಯ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬಕ್ಕೆ ಸಂಪೂರ್ಣವಾಗಿ ಸಿದ್ಧರಾಗಿದ್ದೇವೆ ಎಂದು ಹೇಳಿದರು.

ದೇಶದ ಒಟ್ಟು 543 ಲೋಕಸಭಾ ಕ್ಷೇತ್ರಗಳಿಗೆ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಜೂನ್ 4ರಂದು ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ರಾಜೀವ್ ಕುಮಾರ್ ತಿಳಿಸಿದರು.

ನಮ್ಮ ಕರ್ನಾಟಕ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಅಂದರೆ ಏ.26, ಮೇ 7 ರಂದು ಮತದಾನ ನಡೆಯಲಿದೆ.

ದಕ್ಷಿಣ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯಲಿದ್ದು, ಉತ್ತರ ಕರ್ನಾಟಕ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ರಾಜೀವ್ ಕುಮಾರ್ ಹೇಳಿದರು.

ಏಪ್ರಿಲ್ 26 ರಂದು ರಾಜ್ಯದ ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರದಲ್ಲಿ ಮತದಾನ ನಡೆಯಲಿದೆ.

ಮೇ 7 ರಂದು ಎರಡನೇ ಹಂತದಲ್ಲಿ ಒಟ್ಟು 14 ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ. ಬೆಳಗಾವಿ, ಬಳ್ಳಾರಿ, ಚಿಕ್ಕೋಡಿ, ಹಾವೇರಿ-ಗದಗ, ಕಲಬುರಗಿ, ಬೀದರ್​, ಹುಬ್ಬಳಿ – ಧಾರವಾಡ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಬಾಗಲಕೋಟೆ, ವಿಜಯಪುರದಲ್ಲಿ ಚುನಾವಣೆ ನಡೆಯಲಿದೆ.

2024 ರ ಲೋಕಸಭೆ ಚುನಾವಣೆ ಜೊತೆಗೆ ಆಂಧ್ರ ಪ್ರದೇಶ, ಸಿಕ್ಕಿಂ, ಅರುಣಾಚಲ ಪ್ರದೇಶ ಹಾಗೂ ಒಡಿಶಾ ರಾಜ್ಯಗಳ ವಿಧಾನಸಭಾ ಚುನಾವಣೊ ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅಲ್ಲದೆ ರಾಜ್ಯದ ಸುರಪುರ ವಿಧಾನಸಭಾ ಕ್ಷೇತ್ರಕ್ಕೂ ಉಪ ಚುನಾವಣೆ ಘೋಷಿಸಿದೆ.


Share this with Friends

Related Post