Fri. Nov 1st, 2024

ಚುನಾವಣಾ ಬಾಂಡ್ ಹಗರಣದ ತನಿಖೆ ಯಾಗಲಿ:ಸಿದ್ದರಾಮಯ್ಯ ಆಗ್ರಹ

Share this with Friends

ಬೆಂಗಳೂರು, ಮಾ.16: ಸುಪ್ರೀಂ ಕೋರ್ಟ್ ಉನ್ನತಾಧಿಕಾರದ ಸಮಿತಿಯನ್ನು ರಚಿಸಿ ಚುನಾವಣಾ ಬಾಂಡ್ ಹಗರಣದ ತನಿಖೆ ನಡೆಸಬೇಕು ಎಂದು ‌ಸಿಎಂ ಸಿದ್ದರಾಮಯ್ಯ‌ ಆಗ್ರಹಿಸಿದ್ದಾರೆ.

ತನಿಖೆಯಾಗುವ ವರೆಗೆ ಬಿಜೆಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಬೇಕು ಎಂದು ಹೇಳಿದ್ದಾರೆ.

ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರಹೊಮ್ಮುತ್ತಿರುವ ಚುನಾವಣಾ ಬಾಂಡ್ ಸುಲಿಗೆ ಬಗ್ಗೆ ಭಾರತೀಯ ಜನತಾ ಪಕ್ಷ ಯಾಕೆ ಮೌನವಾಗಿದೆ ಎಂದು ಅವರು ಪ್ರಶ್ನಿಸಿದ್ದಾರೆ.

ಸ್ವಿಸ್ ಬ್ಯಾಂಕ್ ನಲ್ಲಿರುವ ಕಪ್ಪು ಹಣ ತಂದು ಜನರಿಗೆ ಹಂಚುತ್ತೇವೆ, ನೋಟ್ ಬ್ಯಾನ್ ಮಾಡಿ ಕಪ್ಪುಹಣದ ಮೂಲೋತ್ಪಾಟನೆ ಮಾಡುತ್ತೇವೆ, ನಾ ಖಾವೂಂಗಾ – ನಾ ಖಾನೆ ದೂಂಗಾ, ದೇಶದ ಸಂಪತ್ತಿಗೆಲ್ಲ ನಾನೇ ಚೌಕಿದಾರ ಎಂದೆಲ್ಲ ಹೇಳಿ ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ಮೋದಿಯವರೇ ಕನಿಷ್ಠ ಚುನಾವಣಾ ಬಾಂಡ್ ಹಗರಣದ ಬಗ್ಗೆಯಾದರೂ ಉತ್ತರಿಸಿ ಎಂದು ಸಿಎಂ ಒತ್ತಾಯಿಸಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ಭಾರತೀಯ ಸ್ಟೇಟ್ ಬ್ಯಾಂಕ್ ಸಂಪೂರ್ಣ ಮಾಹಿತಿ ನೀಡಲು ಯಾಕೆ ಹಿಂಜರಿಯುತ್ತಿದೆ, ಚುನಾವಣಾ ಬಾಂಡ್ ಗಳ ಮಾರಾಟ ಮತ್ತು ಖರೀದಿ ವ್ಯವಹಾರ ಕಾನೂನುಬದ್ಧವಾಗಿ ನಡೆದಿದ್ದರೆ ಎಸ್‌ಬಿಐ ಯಾಕೆ ಮಾಹಿತಿ ಮುಚ್ಚಿಡಲು ಪ್ರಯತ್ನಿಸುತ್ತಿದೆ, ಎಸ್‌ಬಿಐ ಮೇಲೆ ಒತ್ತಡ ಹೇರುತ್ತಿರುವವರು ಯಾರು ಪ್ರಧಾನಿ ನರೇಂದ್ರ ಮೋದಿ ಅವರೇ ದಯವಿಟ್ಟು ಇದಕ್ಕೆಲ್ಲ ಉತ್ತರ ನೀಡಿ ಎಂದು ‌ಸಿದ್ದರಾಮಯ್ಯ‌ ಆಗ್ರಹಿಸಿದ್ದಾರೆ.

ಚುನಾವಣಾ ಆಯೋಗ ಪ್ರಕಟಿಸಿರುವ ಮಾಹಿತಿಯನ್ನು ನೋಡಿದರೆ ಕೇಂದ್ರ ಸರ್ಕಾರ ಉದ್ಯಮಿಗಳ ಬ್ಲಾಕ್ ಮೇಲ್ ಮಾಡುತ್ತಿರುವಂತೆ ಕಾಣುತ್ತಿದೆ. ಉದ್ಯಮಿಗಳ ಮೇಲೆ ನಡೆದಿರುವ ಐಟಿ, ಇಡಿ, ಸಿಬಿಐ ದಾಳಿಗಳ ದಿನಾಂಕ ಮತ್ತು ಆ ಉದ್ಯಮಿಗಳು ಚುನಾವಣಾ ಬಾಂಡ್ ಗಳ ಖರೀದಿ ದಿನಾಂಕಗಳನ್ನು ನೋಡಿದರೆ ಇದೊಂದು ಪಕ್ಕಾ ಬ್ಲಾಕ್ ಮೇಲ್ ಹಗರಣದಂತೆ ಕಾಣುತ್ತಿದೆ. ದೇಣಿಗೆ ವಸೂಲಿಗಾಗಿ ಕೇಂದ್ರ ಸರ್ಕಾರ ತನ್ನ ಅಧೀನದಲ್ಲಿರುವ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆಯೇ? ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ ಎಂದು ಸಿಎಂ ಪ್ರಶ್ನಿಸಿದ್ದಾರೆ.


Share this with Friends

Related Post