Mon. Dec 23rd, 2024

ಬಿಜೆಪಿ ವರಿಷ್ಠರನ್ನು ಭೇಟಿಯಾದ ಕುಮಾರಸ್ವಾಮಿ, ನಿಖಿಲ್ ಸ್ಪರ್ಧೆ ಬಗ್ಗೆ ಹೇಳಿದ್ದೇನು..?

Kumaraswamy
Share this with Friends

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಸೀಟು ಹಂಚಿಕೆ ವಿಚಾರವಾಗಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಅವರು ದೆಹಲಿಗೆ ತೆರಳಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಹೆಚ್‌.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಗೃಹ ಸಚಿವ ಅಮಿತ್‌ ಶಾ ಅವರನ್ನು ಶನಿವಾರ ಭೇಟಿಯಾಗಿದ್ದರು. ಮೈತ್ರಿ ಟಿಕೆಟ್‌ ಅಂತಿಮಗೊಳಿಸುವ ವಿಚಾರವಾಗಿ ಭೇಟಿ ಮಾಡಿದ್ದರು. ಹೆಚ್‌ಡಿಕೆಗೆ ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್‌ ಸಾಥ್‌ ನೀಡಿದ್ದರು.

ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ವಿಚಾರವಾಗಿ ಮಾತನಾಡಿ, ಅದನ್ನು 25ರ ನಂತರ ಹೇಳ್ತೀನಿ. ನನಗೆ ಆರೋಗ್ಯ ಸಮಸ್ಯೆ ಇದೆ. ಚಿಕಿತ್ಸೆ ನಂತರ ಮಾತಾಡ್ತೀನಿ ಎಂದು ಮಾತನಾಡಿದ್ದಾರೆ.

ದೆಹಲಿಯಿಂದ ವಾಪಸ್‌ ಆದ ಬಳಿಕ ಹೆಚ್‌ಡಿಕೆ, ಬಿಜೆಪಿ ನಾಯಕರ ಭೇಟಿ ಮಾಡಿದ್ದೇವೆ. ಮೂರು ಸೀಟು ಕೇಳಿದ್ದೇವೆ, ತೆಗೆದುಕೊಳ್ತೀವಿ. ಚುನಾವಣೆಗೆ ಎಲ್ಲಾ ರೆಡಿಯಾಗಿದ್ದೀವಿ. ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ. ಶೀಘ್ರದಲ್ಲೇ ಕುಮಾರಸ್ವಾಮಿ ಅವರು ಹೃದಯ ಸಂಬಂಧಿ ಚಿಕಿತ್ಸೆ ಪಡೆಯಲಿರುವ ಹಿನ್ನೆಲೆ ಮಂಡ್ಯದಿಂದ ಸ್ಪರ್ಧೆ ಮಾಡುವ ಬಗ್ಗೆ ಶಾಗೆ ಯಾವ ನಿರ್ಧಾರವನ್ನೂ ತಿಳಿಸಿಲ್ಲ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಗ್ಗೆ ಅಮಿತ್ ಶಾ ಪ್ರಸ್ತಾಪ ಮಾಡಿದ್ದು ಗ್ರಾಮಾಂತರದಲ್ಲಿ ಒಳ್ಳೆಯ ವಾತಾವರಣ ಇದೆ. ಎದುರಾಳಿಗಳು ಡಾ.ಮಂಜುನಾಥ್ ಸೋಲಿಸಲು ಸಾಕಷ್ಟು ಪ್ರಯತ್ನ ಮಾಡುತಿದ್ದಾರೆ. ಮಂಜುನಾಥ್ ಗೆಲ್ಲಿಸಿಕೊಂಡು ಬರುವುದು ನಮ್ಮ ಜವಾಬ್ದಾರಿ ಎಂದು ಶಾಗೆ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.


Share this with Friends

Related Post