ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (ಕರಾಮುವಿ) ವ್ಯಾಪ್ತಿಯಲ್ಲಿ 2026-27ನೇ ಸಾಲಿನ ವಿವಿಧ ಸ್ನಾತಕ (UG) ಮತ್ತು ಸ್ನಾತಕೋತ್ತರ (PG) ಪದವಿ ಕೋರ್ಸ್‌ಗಳಿಗೆ ಉಚಿತ ಪ್ರವೇಶಾತಿ ಪಡೆಯಲು ಬಯಸುವ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾನಿಲಯವು ಸಿಹಿ ಸುದ್ದಿ ನೀಡಿದೆ. ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಇದ್ದ ಕೊನೆಯ ದಿನಾಂಕವನ್ನು ಈಗ ಅಧಿಕೃತವಾಗಿ ವಿಸ್ತರಿಸಲಾಗಿದೆ.
ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ ಹಾಗೂ ಪಾರ್ಸಿ ವರ್ಗದ ಆರ್ಥಿಕವಾಗಿ ಹಿಂದುಳಿದ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಉತ್ತೇಜಿಸುವ ನಿಟ್ಟಿನಲ್ಲಿ ಮುಕ್ತ ವಿವಿಯು ಈ ಉಚಿತ ಶಿಕ್ಷಣದ ಸೌಲಭ್ಯವನ್ನು ಕಲ್ಪಿಸಿದೆ. ತಾಂತ್ರಿಕ ಕಾರಣಗಳು ಹಾಗೂ ವಿದ್ಯಾರ್ಥಿಗಳ ನಿರಂತರ ಮನವಿಯ ಮೇರೆಗೆ ಹೆಚ್ಚಿನ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಅವಧಿ ವಿಸ್ತರಣೆಯ ತೀರ್ಮಾನ ಕೈಗೊಳ್ಳಲಾಗಿದೆ.
ಸ್ನಾತಕ/ಸ್ನಾತಕೋತ್ತರ ಪದವಿಗಳಾದ ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್.ಡಬ್ಲ್ಯೂ, ಬಿ.ಲಿಬ್.ಐ.ಎ.ಸ್ಸಿ, ಎಂ.ಎ., ಎಂ.ಕಾಂ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್ಸಿ., ಎಂ.ಎಸ್.ಡಬ್ಲ್ಯೂ, ಎಂ.ಲಿಬ್.ಐ.ಎಸ್.ಸಿ, ಪಿ.ಜಿ. ಸರ್ಟಿಫಿಕೇಟ್ ಪ್ರೊಗ್ರಾಮ್, ಡಿಪ್ಲೊಮಾ ಪ್ರೊಗ್ರಾಮ್ ಮತ್ತು ಸರ್ಟಿಫಿಕೇಟ್ ಪ್ರೋಗ್ರಾಮ್ ಗಳಿಗೆ ಪ್ರವೇಶಾತಿಯು ದಿನಾಂಕ: 22.06.2026 ರಿಂದ ಪ್ರಾರಂಭವಾಗಿದ್ದು, ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳು ಕರಾಮುವಿಯ ಅಧಿಕೃತ ವೆಬ್‌ಸೈಟ್ www.ksoumysuru.ac.inನಲ್ಲಿ Online Admission Portal ಮುಖಾಂತರ ಪ್ರವೇಶಾತಿ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಕರಾಮುವಿ ಪ್ರಾದೇಶಿಕ ಕೇಂದ್ರ ಬೆಂಗಳೂರು ಹಜ್ ಭವನ ಇಲ್ಲಿ ಸಲ್ಲಿಸಿ ಪ್ರವೇಶಾತಿ ಪಡೆಯಬಹುದಾಗಿರುತ್ತದೆ.
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರವೇಶಾತಿ ಅಂತಿಮ ದಿನಾಂಕದವರೆಗೂ ಎಲ್ಲಾ ಭಾನುವಾರಗಳಂದು ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರಗಳಂದು ಬೆಂಗಳೂರು ಪ್ರಾದೇಶಿಕ ಕೇಂದ್ರ ಹಜ್ ಭವನದ ಕಛೇರಿಯು ಎಂದಿನಂತೆ ಕಾರ್ಯನಿರ್ವಹಿಸುತ್ತದೆ. ವಿದ್ಯಾರ್ಥಿಗಳು ಈ ಅವಕಾಶವನ್ನು ಉಪಯೋಗಿಸಿಕೊಳ್ಳಬೇಕು,ಆಯಾ ಶಿಕ್ಷಣಕ್ರಮಗಳಿಗೆ ವಿಶ್ವವಿದ್ಯಾನಿಲಯವು ಪ್ರವೇಶಾತಿ ಶುಲ್ಕವನ್ನು ನಿಗದಿಪಡಿಸಿದ್ದು, ವಿವರವನ್ನು ವಿವಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆಯೆಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಗಿರೀಶ ಹೆಚ್.ಎನ್ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬಿಎಡ್ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ದಿನಾಂಕ: 10.08.2026 ಅಂತಿಮ ದಿನಾಂಕವಾಗಿದ್ದು, ಸಿಇಟಿ ಪ್ರದೇಶ ಪರೀಕ್ಷೆಯನ್ನು ವಿವಿಯು ನಿಗಧಿಪಡಿಸುವ ಕೇಂದ್ರಗಳಲ್ಲಿ ದಿನಾಂಕ: 16.08.2026 ರ ಭಾನುವಾರದಂದು ನಡೆಸಲಾಗುವುದು ಎಂದು ತಿಳಿಸಿದೆ.
ವಿಶೇಷ ರಿಯಾಯಿತಿಗಳ
ಸರ್ಕಾರದ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯು ವಿದ್ಯಾರ್ಥಿ ಪರವಾಗಿ ಕರಾಮುವಿ ನಿಲಯಕ್ಕೆ ಶುಲ್ಕ ಪಾವತಿ ಯೋಜನೆಯಡಿ ಮಾಡುವ ಅಲ್ಪ ಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ 2026-27ರ ಜುಲೈ ಆವೃತ್ತಿಯಲ್ಲಿ ಉಚಿತ ಪ್ರವೇಶಾತಿ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.08.2026 ರವರೆಗೆ ವಿಸ್ತರಿಸಲಾಗಿದೆ.
ಬಿ.ಪಿ.ಎಲ್. ಕಾರ್ಡ್ ಹೊಂದಿರುವ ಅರ್ಹ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್ ಹಾಗೂ ಎಕ್ಸ್ ಸರ್ವಿಸ್‌ಮನ್ ವಿದ್ಯಾರ್ಥಿಗಳಿಗೆ, ಆಟೋ ಮತ್ತು ಕ್ಯಾಬ್ ಚಾಲಕರು ಮತ್ತು ಅವರ ಪತಿ/ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ಮತ್ತು KSRTC/BMTC/NWKRTC/KKRTC ಯಲ್ಲಿನ ನೌಕರರುಗಳಿಗೆ ಬೋಧನಾ ಶುಲ್ಕದಲ್ಲಿ .10% 2 0 (UG & PG Degree Programs Only).
ಕೋವಿಡ್-2019 ಸಾಂಕ್ರಾಮಿಕ ರೋಗದಿಂದ ಮೃತರಾದ ಆ ತಂದೆ/ತಾಯಿಯ ಮಕ್ಕಳಿಗೆ ಅವರು ಅರ್ಹತೆ ಹೊಂದಿ ಪ್ರವೇಶ ಬಯಸುವ ಶಿಕ್ಷಣಕ್ರಮಗಳಿಗೆ ಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ, ತೃತೀಯ ಲಿಂಗ (Transgender) ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ.
ಶೇ.50 ಕ್ಕೂ ಹೆಚ್ಚಿನ ದೃಷ್ಟಿದೋಷವುಳ್ಳ ವಿದ್ಯಾರ್ಥಿಗಳಿಗೆ (B.Ed & M.B.A ಕಾರ್ಯಕ್ರಮಗಳಿಗೆ ಹೊರತುಪಡಿಸಿ) ಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ.
SC/ST ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿ ಸರ್ಕಾರದ SSP ಮುಖಾಂತರ ವಿದ್ಯಾರ್ಥಿ ವೇತನ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:- ಪ್ರಾದೇಶಿಕ ನಿರ್ದೇಶಕರು, ಕರಾಮುವಿ ಬೆಂಗಳೂರು ಪ್ರಾದೇಶಿಕ ಕೇಂದ್ರ-07 ಹಜ್ ಭವನ, ತಿರುಮೇನಹಳ್ಳಿ ಕ್ರಾಸ್, -560064 :- 9448668880, 9739803295, 9844148182, 9686069444, 8217690865 ಸಂಪರ್ಕಿಸಬಹುದಾಗಿದೆ.

